Featured

ಪಹಲ್ಗಾಮ್​​ ನಲ್ಲಿ ದಾಳಿ ನಡೆಸಿರುವ ಉಗ್ರರು ಪಾಕಿಸ್ತಾನದಿಂದಲೇ ಬಂದಿದ್ದಾರೆ ಎಂಬುದಕ್ಕೆ ಪುರಾವೆ ಏನಿದೆ  : ಪಿ ಚಿದಂಬರಂ – vishwanews24

ಪಹಲ್ಗಾಮ್​​ ನಲ್ಲಿ ದಾಳಿ ನಡೆಸಿರುವ ಉಗ್ರರು ಪಾಕಿಸ್ತಾನದಿಂದಲೇ ಬಂದಿದ್ದಾರೆ ಎಂಬುದಕ್ಕೆ ಪುರಾವೆ ಏನಿದೆ  : ಪಿ ಚಿದಂಬರಂ

ನವದೆಹಲಿ: ಪಹಲ್ಗಾಮ್​​ ನಲ್ಲಿ ದಾಳಿ ನಡೆಸಿರುವ ಉಗ್ರರು ಪಾಕಿಸ್ತಾನದಿಂದಲೇ ಬಂದಿದ್ದಾರೆ ಎಂಬುದಕ್ಕೆ ಪುರಾವೆ ಏನಿದೆ ಎಂದು ಕಾಂಗ್ರೆಸ್​​ ಹಿರಿಯ ನಾಯಕ ಹಾಗೂ ಮಾಜಿ ಗೃಹ ಸಚಿವ ಪಿ ಚಿದಂಬರಂ ಪ್ರಶ್ನೆ ಮಾಡಿದ್ದಾರೆ.

ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್ ಕುರಿತ ಚರ್ಚೆಗೂ ಮುನ್ನ ಅವರು ನೀಡಿರುವ ಹೇಳಿಕೆ ರಾಜಕೀಯ ಬಿರುಗಾಳಿಯನ್ನು ಸೃಷ್ಟಿಸಿದೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಪಹಲ್ಗಾಮ್ ದಾಳಿ ಕುರಿತು ಕೆಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು ನಿಜವಾಗಿಯೂ ಪಾಕಿಸ್ತಾನದಿಂದ ಬಂದವರೇ? ಇದಕ್ಕೆ ಪರಾವೆ ಏನಿದೆ? ದೇಶೀಯ ಭಯೋತ್ಪಾದಕರೂ ಈ ಕೃತ್ಯ ನಡೆಸಿರಬಹುದಲ್ಲವೇ? ಎಂದು ಪ್ರಶ್ನಿಸಿದ್ದಾರೆ.

ಈ ಹೇಳಿಕೆ ಬಳಿಕ ಬಿಜೆಪಿ ಕಾಂಗ್ರೆಸ್​​ ಅನ್ನು ಟೀಕಿಸಿದೆ. ಕಾಂಗ್ರೆಸ್​ ಯಾವಾಗಲೂ ಶತ್ರುಗಳ ಪರವಾಗಿ ನಿಲ್ಲುತ್ತದೆ. ಪಾಕಿಸ್ತಾನಕ್ಕೆ ಕ್ಲೀನ್ ಚಿಟ್ ಕೊಡುತ್ತದೆ ಎಂದು ಆರೋಪಿತು. ದಾಳಿಯ ನಂತರ ರಾಷ್ಟ್ರೀಯ ತನಿಖಾ ಸಂಸ್ಥೆ ಏನು ಮಾಡಿದೆ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸುತ್ತಿಲ್ಲ ಎಂದು ಚಿದಂಬರಂ ಹೇಳಿದ್ದಾರೆ.

ಸರ್ಕಾರವು ಭಯೋತ್ಪಾದಕರನ್ನು ಗುರುತಿಸಿದ್ದಾರೆಯೇ? ಅವರು ಪಾಕಿಸ್ತಾನದಿಂದ ಬಂದಿದ್ದಾರೆ ಎಂಬುದು ಖಚಿತವೇ? ಇದರೊಂದಿಗೆ, ಆಪರೇಷನ್ ಸಿಂಧೂರ್ ಸಮಯದಲ್ಲಿ ಉಂಟಾದ ನಷ್ಟವನ್ನು ಮರೆಮಾಚಿದ್ದಾರೆ ಎಂದು ಚಿದಂಬರಂ ಆರೋಪಿಸಿದರು. ಯುದ್ಧದಲ್ಲಿ ಎರಡೂ ಕಡೆಯವರು ನಷ್ಟ ಅನುಭವಿಸುತ್ತಾರೆ ಎಂದು ಚಿದಂಬರಂ ಹೇಳಿದರು. ವಿಶ್ವ ಯುದ್ಧದಲ್ಲಿ ಬ್ರಿಟನ್ ತನ್ನ ನಷ್ಟವನ್ನು ಪ್ರತಿದಿನ ಬಹಿರಂಗಪಡಿಸಿತು. ಭಾರತವೂ ಅದೇ ರೀತಿ ಮಾಡಬೇಕು. ಸರ್ಕಾರ ಎಲ್ಲವನ್ನೂ ಮರೆಮಾಚುತ್ತಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿದ ಕಾಂಗ್ರೆಸ್ ನಾಯಕರು, ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್ ಬಗ್ಗೆ ಅವರು ಮಾತನಾಡುತ್ತಿಲ್ಲ ಎಂದು ಹೇಳಿದರು. ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಬಹುದಾದರೆ, ರ್ಯಾಲಿಗಳಲ್ಲಿ ಭಾಷಣ ಮಾಡಬಹುದಾದರೆ, ಅವರು ಸಂಸತ್ತಿನಲ್ಲಿ ಏಕೆ ಮಾತನಾಡುತ್ತಿಲ್ಲ ಎಂದು ಅವರು ಕೇಳಿದರು.

ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮವನ್ನು ಭಾರತ ಸ್ವತಃ ಘೋಷಿಸಿಲ್ಲ, ಬದಲಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ ಎಂದು ಚಿದಂಬರಂ ಆರೋಪಿಸಿದರು. ಸರ್ಕಾರ ಇದರ ಬಗ್ಗೆ ಚರ್ಚಿಸಲು ಹೆದರುತ್ತಿದೆಯೇ? ಎಂದರು.

ಭಾರತ ಪಾಕಿಸ್ತಾನದ ವಿರುದ್ಧ ಕ್ರಮ ಕೈಗೊಂಡಾಗಲೆಲ್ಲಾ, ಕಾಂಗ್ರೆಸ್ ನಾಯಕರು ಇಸ್ಲಾಮಾಬಾದ್‌ನ ರಕ್ಷಣೆಗೆ ನಿಂತಿರುವುದು ಕಂಡುಬರುತ್ತದೆ ಇದು ದುರದೃಷ್ಟಕರ ಎಂದು ಅಮಿತ್ ಮಾಳವೀಯ ಹೇಳಿದ್ದಾರೆ.

Vishwa News 24

Recent Posts

ರಾಜ್ಯಸಭೆ ಸ್ಥಾನದಿಂದ ನನ್ನ ಮೋದಿ ಅವರ ಸಂಬಂಧ ಮುಕ್ತಾಯ ಆಗೋದಿಲ್ಲ : ಹೆಚ್.ಡಿ ದೇವೇಗೌಡ – vishwanews24

ನನ್ನ ಜೀವನದ ಕೊನೆ ಘಟ್ಟದವರೆಗೂ ಮೈತ್ರಿ ಮುಂದುವರೆಸಿಕೊಂಡು ಹೋಗುತ್ತೇನೆ : ಹೆಚ್‌ಡಿಡಿ ಬೆಂಗಳೂರು: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ …

41 minutes ago

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ…

1 hour ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ…

1 hour ago

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ – vishwanews24

ಮನೆ ಕೆಲಸಕ್ಕೆ ಸೇರಿದ್ದ ದಂಪತಿಯಿಂದ ಕಳ್ಳತನ ; 25 ಲಕ್ಷ ಹಣ ಕದ್ದು ನೇಪಾಳಕ್ಕೆ ಎಸ್ಕೇಪ್ ಆಗುತ್ತಿದ್ದ ವೇಳೆ ಅರೆಸ್ಟ್ ಬೆಂಗಳೂರು:…

2 hours ago

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ – vishwanews24

ಮಂಗಳೂರು: ಜೋಕಟ್ಟೆ ಫ್ಲೈಓವರ್ ಬಳಿ ಅಪರಿಚಿತ ಯುವಕನ ಶವ ಪತ್ತೆ ಮಂಗಳೂರು: ಪಣಂಬೂರಿನ ಜೋಕಟ್ಟೆ ಬಳಿ ಬುಧವಾರ ಯುವಕನೊಬ್ಬನ ಶವ…

2 hours ago

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ : ಪ್ರಧಾನಿಗೆ ಮುಸ್ಲಿಂ ಬಾಂಧವ್ಯ ವೇದಿಕೆ ಮನವಿ – vishwanews24

ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ, ಗೋಹತ್ಯೆ, ಗೋಮಾಂಸ ರಫ್ತನ್ನು ನಿಷೇಧಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ…

3 hours ago