Featured

ಪಹಲ್ಗಾಮ್ ನ ಉಗ್ರರ ದಾಳಿ :  ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಸಕಲ ವ್ಯವಸ್ಥೆ : ಸಿದ್ದರಾಮಯ್ಯ – vishwanews24

ಪಹಲ್ಗಾಮ್ ನ ಉಗ್ರರ ದಾಳಿ :  ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರದಿಂದ ಸಕಲ ವ್ಯವಸ್ಥೆ : ಸಿದ್ದರಾಮಯ್ಯ

ಬೆಂಗಳೂರು:ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಸಂದರ್ಭದಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಸರ್ಕಾರ ಸಕಲ ವ್ಯವಸ್ಥೆ ಮಾಡಲಾಗಿದೆ ಹಾಗೂ ಉಗ್ರರ ದಾಳಿಯ ಮಾಹಿತಿ ಕೊರತೆ ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.ಕನ್ನಡಿಗರನ್ನು ಕರೆತರಲು ಕಾರ್ಮಿಕ ಸಚಿವರಿಗೆ ಸೂಚನೆ. ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ ಮುಖ್ಯಮಂತ್ರಿಗಳು, ಕರ್ನಾಟಕದ ಪ್ರವಾಸಿಗರಲ್ಲಿ ಮಂಜುನಾಥ್ ಹಾಗೂ ಭರತ್ ಭೂಷಣ್ ಎಂಬುವರು ಮೃತರಾಗಿರುವ ಬಗ್ಗೆ ಮಾಹಿತಿ ನೀಡಿದರು..

ಕನ್ನಡಿಗರ ರಕ್ಷಣೆ ಹಾಗೂ ಇನ್ನಿತರ ವ್ಯವಸ್ಥೆಗಳಿಗಾಗಿ ಅಧಿಕಾರಿಗಳ ತಂಡವನ್ನು ಕಾಶ್ಮೀರಕ್ಕೆ ರವಾನಿಸಲಾಗಿದೆ. ಅಲ್ಲದೇ, ಕಾಶ್ಮೀರಕ್ಕೆ ತೆರಳಿರುವ 40 ಕ್ಕೂ ಅಧಿಕ ಕನ್ನಡಿಗರನ್ನು ವಿಶೇಷ ವಿಮಾನ ವ್ಯವಸ್ಥೆ ಮಾಡಿ ಸುರಕ್ಷಿತವಾಗಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರನ್ನೂ ಕಾಶ್ಮೀರಕ್ಕೆ ಕಳಿಸಲಾಗಿದೆ ಎಂದರು.

ಕಾಶ್ಮೀರದ ಪಹಲ್ಗಾಮ್ ನಡೆದಿರುವ ಉಗ್ರರ ದಾಳಿ ಪೂರ್ವಯೋಜಿತ ಸಂಚು. ಪ್ರಾಣಹತ್ಯೆ ಮಾಡಿರುವ ಈ ಘಟನೆ ಅತ್ಯಂತ ಖಂಡನೀಯ. ಘಟನೆಯಲ್ಲಿ ಸುಮಾರು 28 ಜನ ಮೃತಪಟ್ಟಿರುವ ಭೀಕರವಾದ ಉಗ್ರರ ದಾಳಿ ನಡೆಯುವ ಮಾಹಿತಿ ಮೊದಲೇ ತಿಳಿಯದಿರುವುದು ಕೇಂದ್ರದ ಗುಪ್ತಚರ ಇಲಾಖೆಯ ವೈಫಲ್ಯವಾಗಿದೆ. ಈ ಹಿಂದೆ ನಡೆದ ಪುಲ್ವಾಮಾ ಘಟನೆಯಲ್ಲಿ ಗುಪ್ತಚರ ಮಾಹಿತಿಯ ವೈಫಲ್ಯವಿದೆ ಎಂದರು.

 

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

16 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago