ವರ್ತೆ ಪಂಜುರ್ಲಿ ದೈವದ ಕೋಲದಲ್ಲಿ ಅಳಲನ್ನು ತೋಡಿಕೊಂಡ ಕುಟುಂಬಸ್ಥರು..
ಕೊಲೆಗಾರರನ್ನು ಸರ್ವನಾಶ ಮಾಡುವುದಾಗಿ ದೈವ ಭರವಸೆ..
ಉಡುಪಿ : ಜಿಲ್ಲೆ ಕಾಪು ತಾಲೂಕಿನ ಪಾಂಗಾಳ ಗ್ರಾಮದಲ್ಲಿ ಶರತ್ ಶೆಟ್ಟಿ (42) ಕೊಲೆ ಪ್ರಕರಣ ಸಂಬಂಧಿಸಿ ಕುಟುಂಬಸ್ಥರು ಕೊಲೆಗಾರರ ವಿರುದ್ಧ ಕ್ರಮಕ್ಕೆ ದೈವದ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ.
ಪಾಂಗಾಳ ಶರತ್ ವಿ. ಶೆಟ್ಟಿ ಕೊಲೆಯಾಗಿ ತಿಂಗಳು ಕಳೆದ್ರೂ, ಕೊಲೆ ಸಂಬಂಧಿಸಿ ಹಲವು ಮಂದಿಯ ಬಂಧಿಸಲಾಗಿದೆ ಆದ್ರೆ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಪತ್ತೆಯಾಗಬೇಕು .
ಕೊಲೆಗಾರರ ವಿರುದ್ಧ ಕ್ರಮ ತೆಗೆದುಕೊಳ್ಳಲು ಕುಟುಂಬಸ್ಥರು ನಿನ್ನೆ ರಾತ್ರಿ ನಡೆದ ವರ್ತೆ ಪಂಜುರ್ಲಿ ದೈವದ ಕೋಲದಲ್ಲಿ ಅಳಲನ್ನು ತೋಡಿಕೊಂಡಿದ್ದಾರೆ. ಅದಕ್ಕೆ ಪ್ರತ್ಯತ್ತರವಾಗಿ ಶರತ್ ಶೆಟ್ಟಿ ಸಾವಿನಂತೆ ಕೊಲೆಗಾರರನ್ನು ಸರ್ವನಾಶ ಮಾಡುವುದಾಗಿ ದೈವ ಭರವಸೆ ನೀಡಿದೆ ಎಂದು ವರದಿಯಾಗಿದೆ.
ಶರತ್ ಶೆಟ್ಟಿ ಕೊಲೆ ಪ್ರಕರಣ :
ಸದ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಕ್ರಿಯಾಶೀಲರಾಗಿದ್ದ ಶರತ್ ವಿ. ಶೆಟ್ಟಿಪಾಂಗಾಳ. ಇವರು ಪಾಂಗಾಳ ಪಡುವಿನ ಬಬ್ಬುಸ್ವಾಮಿ ದೈವಸ್ಥಾನದಲ್ಲಿ ನಡೆಯುತ್ತಿದ್ದ ನೇಮದಲ್ಲಿ ಪಾಲ್ಗೊಂಡಿದ್ದಾಗ ಮಾತುಕತೆಗೆಂದು ಮಾರಕಾಸ್ತ್ರದಿಂದ ಇರಿದು ಕೊಲೆಗೈದು ಪರಾರಿಯಾಗಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ : ಪೋಲಿಸ್ ಕಾನ್ಸ್ಟೇಬಲ್ ಹುದ್ದೆಗೆ ಉಚಿತ ತರಭೇತಿ ಕಾರ್ಯಗಾರ ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯಲ್ಲಿ ಸಿವಿಲ್ ಪೋಲಿಸ್ ಕಾನ್ಸ್ಟೇಬಲ್ 3395…
ಕಾರ್ಕಳ : ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಆರೋಪಿ ಸೌಮ್ಯ ಶೆಟ್ಟಿ ಜಾಮೀನು ನಿರಾಕರಿಸಿದ ಹೈಕೋರ್ಟ್ ಉಡುಪಿ : ಕಳೆದ…
ಇಂಡಿಗೋ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಹೊಸ 'ಲೈಟ್' ದರದಲ್ಲಿ ಸಿಗಲಿದೆ ಭರ್ಜರಿ ಲಾಭ ನವದೆಹಲಿ: ಭಾರತದ ಪ್ರಮುಖ ವಿಮಾನಯಾನ…
ಉಡುಪಿ : ಸಿಎ, ವೈದ್ಯ, ಪತ್ರಿಕಾ ರಂಗದ ಸಾಧಕರಿಗೆ ಮಲಬಾರ್ ವಿಶ್ವ ಗೌರವ ಪುರಸ್ಕಾರ ಉಡುಪಿ : ಮಲಬಾರ್ ಗೋಲ್ಡ್…
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…