ಉಡುಪಿ: ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ಪಾಂಗಾಳದಲ್ಲಿ 2023 ರಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಭೂಗತ ಪಾತಕಿ ಕಲಿ ಯೋಗೀಶ ಸಹಿತ ಇಬ್ಬರು ಆರೋಪಿಗಳ ವಿರುದ್ಧ ಕೋಕಾ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಪ್ರಕರಣದ ಎರಡನೇ ಆರೋಪಿ ಕಾಪು ತಾಲೂಕಿನ ಕೋಟೆ ಗ್ರಾಮದ ತೌಡಬೆಟ್ಟು ನಿವಾಸಿ ಯೋಗೀಶ್ ಆಚಾರ್ಯ (54) ಎಂಬಾತನನ್ನು ಬಂಧಿಸಿದ್ದು, ಕೋಕಾ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಈತನನ್ನು ಮೈಸೂರು ವಿಶೇಷ ಕೋಕಾ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಕಲಿ ಯೋಗೀಶ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ.
ಪ್ರಕರಣದ ವಿವರ
2022 ರ ಡಿಸೆಂಬರ್‌ನಲ್ಲಿ ಆರೋಪಿ ಕಲಿ ಯೋಗೀಶ್ ಮತ್ತು ಯೋಗೀಶ್ ಆಚಾರ್ಯ ಹಾಗೂ ಆತನ ಸಹಚರರು ಚಂದ್ರಶೇಖರ ಹಾಗೂ ಇತರರ ಮೇಲೆ ಜಾಗದ ವಿಚಾರವಾಗಿ ಹಲ್ಲೆ ನಡೆಸಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2023 ಮಾರ್ಚ್‌ನಲ್ಲಿ ಈ ಹಲ್ಲೆ ವಿಚಾರವಾಗಿ ಶರತ್ ಶೆಟ್ಟಿ ಎಂಬವರು ಆರೋಪಿ ಯೋಗೀಶ್ ಆಚಾರ್ಯನನ್ನು ಬೆಂಬಲಿಸದೆ ಚಂದ್ರಶೇಖರ್ ಅವರಿಗೆ ಸಹಾಯ ಮಾಡಿದ್ದ ಎಂದು ತಿಳಿದು ಶರತ್ ಶೆಟ್ಟಿಯನ್ನು ಕಲಿ ಯೋಗೀಶ್ ಮತ್ತು ಯೋಗೀಶ್ ಆಚಾರ್ಯ ಹಾಗೂ ಆತನ ಸಹಚರರು ಕೊಲೆ ಮಾಡಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಎರಡು ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಚಂದ್ರಶೇಖರ್ ಶೆಟ್ಟಿ ಪಾಂಗಾಳ ಅವರಿಗೆ 2025 ಅ. 20 ರಂದು ರಾತ್ರಿ 8.15 ಕ್ಕೆ ಯೋಗೀಶ್ ಆಚಾರ್ಯ ಹಾಗೂ ಆತನ ಸಹಚರರ ವಿರುದ್ಧವಾಗಿ ಸಾಕ್ಷಿ ನುಡಿಯದಂತೆ ಮತ್ತು ಪ್ರಕರಣಗಳನ್ನು ರಾಜಿ ಮಾಡಿಕೊಳ್ಳುವಂತೆ ಹಾಗೂ ಈ ಮೊದಲು ಯೋಗೀಶ ಆಚಾರ್ಯನ ಜತೆಯಲ್ಲಿ ಹೊಂದಾಣಿಕೆ ಆಗದ ಹಣದ ವಿಚಾರವನ್ನು ಹೊಂದಿಕೆ ಮಾಡಬೇಕು. ತಪ್ಪಿದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ಬೈದು, ನಿಂದನೆ ಮಾಡಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ| ಹರ್ಷ ಪ್ರಿಯಂವದಾ, ಕಾಪು ವೃತ್ತ ನಿರೀಕ್ಷಕ ಅಸ್ಮಿತ್ ಆಲಿ ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ತೇಜಸ್ವಿ ಟಿ.ಐ., ಸಿಬಂದಿ ತಂಡ ಕೊಲೆ ಪ್ರಕರಣದ 2 ನೇ ಆರೋಪಿ ಯೋಗೀಶ್ ಆಚಾರ್ಯ (54) ನನ್ನು ಬಂಧಿಸಿದೆ.
ಈತನನ್ನು ಉಡುಪಿ ಹೆಚ್ಚುವರಿ ಹಿರಿಯ ಸಿವಿಲ್ ಜಡ್ಜ್ ಮತ್ತು ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.
ಆರೋಪಿಗಳ ವಿರುದ್ಧ 2 ಕ್ಕಿಂತಲೂ ಹೆಚ್ಚಿನ ಘೋರ ಪ್ರಕರಣಗಳಿರುವ ಹಿನ್ನೆಲೆಯಲ್ಲಿ ಕೊಲೆ ಆರೋಪಿಗಳಾದ ಯೋಗೀಶ್ ಆಚಾರ್ಯ ಹಾಗೂ ಕಲಿ ಯೋಗೀಶ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ದಾಖಲಿಸಲಾಗಿದೆ. ಅದರಂತೆ ಆತನನ್ನು ಮತ್ತೆ ಬಂಧಿಸಿ ಮೈಸೂರಿನ ವಿಶೇಷ ಕೋಕಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿ ಕಲಿ ಯೋಗೀಶ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…