ಉಡುಪಿ

ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ: ಭೂಗತ ಪಾತಕಿ ಕಲಿ ಯೋಗೀಶ್ ಸಹಿತ ಇಬ್ಬರು ಆರೋಪಿಗಳ ವಿರುದ್ಧ ಕೋಕಾ ಆ್ಯಕ್ಟ್ – vishwanews24

ಪಾಂಗಾಳ ಶರತ್ ಶೆಟ್ಟಿ ಕೊಲೆ ಪ್ರಕರಣ : ಆರೋಪಿಗಳ ವಿರುದ್ಧ ಕೋಕಾ ಆ್ಯಕ್ಟ್

ಉಡುಪಿ: ಕಾಪು ಪೊಲೀಸ್ ಠಾಣೆ ವ್ಯಾಪ್ತಿಯ ಪಾಂಗಾಳದಲ್ಲಿ 2023 ರಲ್ಲಿ ನಡೆದ ಶರತ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಭೂಗತ ಪಾತಕಿ ಕಲಿ ಯೋಗೀಶ ಸಹಿತ ಇಬ್ಬರು ಆರೋಪಿಗಳ ವಿರುದ್ಧ ಕೋಕಾ ಆ್ಯಕ್ಟ್ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿ ಕೊಲೆ ಪ್ರಕರಣದ ಎರಡನೇ ಆರೋಪಿ ಕಾಪು ತಾಲೂಕಿನ ಕೋಟೆ ಗ್ರಾಮದ ತೌಡಬೆಟ್ಟು ನಿವಾಸಿ ಯೋಗೀಶ್ ಆಚಾರ್ಯ (54) ಎಂಬಾತನನ್ನು ಬಂಧಿಸಿದ್ದು, ಕೋಕಾ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಈ ಪ್ರಕರಣದ ತನಿಖೆ ಹಾಗೂ ವಿಚಾರಣೆಗೆ ಈತನನ್ನು ಮೈಸೂರು ವಿಶೇಷ ಕೋಕಾ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಕರಣದ ಪ್ರಮುಖ ಆರೋಪಿ ಕಲಿ ಯೋಗೀಶ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ.

ಪ್ರಕರಣದ ವಿವರ
2022 ರ ಡಿಸೆಂಬರ್‌ನಲ್ಲಿ ಆರೋಪಿ ಕಲಿ ಯೋಗೀಶ್ ಮತ್ತು ಯೋಗೀಶ್ ಆಚಾರ್ಯ ಹಾಗೂ ಆತನ ಸಹಚರರು ಚಂದ್ರಶೇಖರ ಹಾಗೂ ಇತರರ ಮೇಲೆ ಜಾಗದ ವಿಚಾರವಾಗಿ ಹಲ್ಲೆ ನಡೆಸಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 2023 ಮಾರ್ಚ್‌ನಲ್ಲಿ ಈ ಹಲ್ಲೆ ವಿಚಾರವಾಗಿ ಶರತ್ ಶೆಟ್ಟಿ ಎಂಬವರು ಆರೋಪಿ ಯೋಗೀಶ್ ಆಚಾರ್ಯನನ್ನು ಬೆಂಬಲಿಸದೆ ಚಂದ್ರಶೇಖರ್ ಅವರಿಗೆ ಸಹಾಯ ಮಾಡಿದ್ದ ಎಂದು ತಿಳಿದು ಶರತ್ ಶೆಟ್ಟಿಯನ್ನು ಕಲಿ ಯೋಗೀಶ್ ಮತ್ತು ಯೋಗೀಶ್ ಆಚಾರ್ಯ ಹಾಗೂ ಆತನ ಸಹಚರರು ಕೊಲೆ ಮಾಡಿದ್ದರು. ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಎರಡು ಪ್ರಕರಣದಲ್ಲಿ ಪ್ರಮುಖ ಸಾಕ್ಷಿಯಾಗಿರುವ ಚಂದ್ರಶೇಖರ್ ಶೆಟ್ಟಿ ಪಾಂಗಾಳ ಅವರಿಗೆ 2025 ಅ. 20 ರಂದು ರಾತ್ರಿ 8.15 ಕ್ಕೆ ಯೋಗೀಶ್ ಆಚಾರ್ಯ ಹಾಗೂ ಆತನ ಸಹಚರರ ವಿರುದ್ಧವಾಗಿ ಸಾಕ್ಷಿ ನುಡಿಯದಂತೆ ಮತ್ತು ಪ್ರಕರಣಗಳನ್ನು ರಾಜಿ ಮಾಡಿಕೊಳ್ಳುವಂತೆ ಹಾಗೂ ಈ ಮೊದಲು ಯೋಗೀಶ ಆಚಾರ್ಯನ ಜತೆಯಲ್ಲಿ ಹೊಂದಾಣಿಕೆ ಆಗದ ಹಣದ ವಿಚಾರವನ್ನು ಹೊಂದಿಕೆ ಮಾಡಬೇಕು. ತಪ್ಪಿದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ, ಅವಾಚ್ಯ ಶಬ್ದಗಳಿಂದ ಬೈದು, ನಿಂದನೆ ಮಾಡಿದ್ದರು.

ಈ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕಿ ಡಾ| ಹರ್ಷ ಪ್ರಿಯಂವದಾ, ಕಾಪು ವೃತ್ತ ನಿರೀಕ್ಷಕ ಅಸ್ಮಿತ್ ಆಲಿ ಮಾರ್ಗದರ್ಶನದಲ್ಲಿ ಕಾಪು ಪೊಲೀಸ್ ಠಾಣೆಯ ಪಿಎಸ್‌ಐ ತೇಜಸ್ವಿ ಟಿ.ಐ., ಸಿಬಂದಿ ತಂಡ ಕೊಲೆ ಪ್ರಕರಣದ 2 ನೇ ಆರೋಪಿ ಯೋಗೀಶ್ ಆಚಾರ್ಯ (54) ನನ್ನು ಬಂಧಿಸಿದೆ.
ಈತನನ್ನು ಉಡುಪಿ ಹೆಚ್ಚುವರಿ ಹಿರಿಯ ಸಿವಿಲ್ ಜಡ್ಜ್ ಮತ್ತು ಎಸಿಜೆಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಆರೋಪಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ.

ಆರೋಪಿಗಳ ವಿರುದ್ಧ 2 ಕ್ಕಿಂತಲೂ ಹೆಚ್ಚಿನ ಘೋರ ಪ್ರಕರಣಗಳಿರುವ ಹಿನ್ನೆಲೆಯಲ್ಲಿ ಕೊಲೆ ಆರೋಪಿಗಳಾದ ಯೋಗೀಶ್ ಆಚಾರ್ಯ ಹಾಗೂ ಕಲಿ ಯೋಗೀಶ್ ವಿರುದ್ಧ ಕರ್ನಾಟಕ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ ದಾಖಲಿಸಲಾಗಿದೆ. ಅದರಂತೆ ಆತನನ್ನು ಮತ್ತೆ ಬಂಧಿಸಿ ಮೈಸೂರಿನ ವಿಶೇಷ ಕೋಕಾ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈ ಪ್ರಕರಣದಲ್ಲಿ ಆರೋಪಿ ಕಲಿ ಯೋಗೀಶ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾನೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

2 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

3 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago