ಇಸ್ಲಾಮಾಬಾದ್,: ಪಾಕಿಸ್ತಾನದಲ್ಲಿರುವ 400ಕ್ಕೂ ಅಧಿಕ ದೇವಾಲಯಗಳನ್ನು ಜೀಣೋದ್ಧಾರ ಮಾಡಲು ಪ್ರಧಾನಿ ಇಮ್ರಾನ್ ಖಾನ್ ಮುಂದಾಗಿದ್ದಾರೆ ಎಂದು ಪಾಕ್ ಸರ್ಕಾರ ಮಾಹಿತಿ ನೀಡಿದೆ.
ಕೆಲ ದಿನಗಳ ಹಿಂದೆಯಷ್ಟೇ ಭಾರತದೊಂದಿಗೆ ಶಾಂತಿ ಮಾತುಕತೆ ನಡೆಸಲು ಸಿದ್ಧ ಎಂದು ಪದೇಪದೆ ಹೇಳುತ್ತಿದ್ದ ಪಾಕಿಸ್ತಾನ ಇದೀಗ ಮತ್ತೊಂದು ಮಾಹಿತಿಯನ್ನು ಹೊರ ಹಾಕಿದೆ. ನರೇಂದ್ರ ಮೋದಿ ಪ್ರಧಾನಿಯಾದರೆ ಶಾಂತಿ ಮಾತುಕತೆಗೆ ಅನುಕೂಲವಾಗುತ್ತದೆ ಎಂದು ಇತ್ತೀಚೆಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ ನೀಡಿದ್ದರು. ಇದೀಗ ಅಲ್ಲಿನ 400ಕ್ಕೂ ಅಧಿಕ ದೇವಾಲಯಗಳನ್ನು ಜೀಣೋದ್ಧಾರ ಮಾಡಲು ಮುಂದಾಗಿದ್ದಾರೆ ಎಂದು ಪಾಕ್ ಸರ್ಕಾರ ಮಾಹಿತಿ ನೀಡಿದೆ.
ಸಿಯಾಲ್ಕೋಟ್’ನ ಜಗನ್ನಾಥ ದೇವಾಲಯ ಮತ್ತು ಪೇಶಾವರದಲ್ಲಿರುವ ಶಿವನ ಐತಿಹಾಸಿಕ ದೇವಾಲಯಗಳಿಂದ ಜೀಣೋದ್ಧಾರ ಪ್ರಕ್ರಿಯೆ ಆರಂಭವಾಗಲಿದೆ.ಸಿಯಾಲ್ಕೋಟ್ನ ಜಗನ್ನಾಥ ದೇವಾಲಯ ಮತ್ತು 1000 ವರ್ಷಗಳಷ್ಟು ಪುರಾತನವಾದ ಶಿವಾಲಯದ ಜೀಣೋದ್ಧಾರಕ್ಕೆ ನಿರ್ಧರಿಸಲಾಗಿದೆ ಎಂದು ಹೇಳಿದೆ.
1992ರಲ್ಲಿ ಬಾಬ್ರಿ ಮಸೀದಿ ದ್ವಂಸ ಪ್ರಕರಣದ ಸಂದರ್ಭ ಭಾರತದಲ್ಲಿ ಉಂಟಾದ ಗಲಭೆ ಬಳಿಕ ಈ ದೇವಾಲಯವನ್ನು ಮುಚ್ಚಲಾಗಿತ್ತು. ಪೇಷಾವರದಲ್ಲಿರುವ ಗೋರಖ್ನಾಥ ದೇವಾಲಯವನ್ನೂ ಪುನರುತ್ಥಾನಗೊಳಿಸಲಾಗುತ್ತದೆ. ಪ್ರತಿವರ್ಷ ಕೆಲ ದೇವಾಲಯಗಳಂತೆ ಹಲವು ಹಂತಗಳಲ್ಲಿ ಜೀಣೋದ್ಧಾರ ಪೂರ್ಣಗೊಳಿಸಿ ಹಿಂದುಗಳಿಗೆ ಒಪ್ಪಿಸಲು ಪಾಕಿಸ್ತಾನ ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…