ಹೊಸದಿಲ್ಲಿ: ಸಮುದ್ರ ಮಾರ್ಗವಾಗಿ ಪಾಕಿಸ್ತಾನದಲ್ಲಿ ತರಬೇತಿ ಪಡೆದ ಕಮಾಂಡೋಗಳು ಭಾರತದೊಳಗೆ ನುಸುಳಿ ಗುಜರಾತ್ ನಲ್ಲಿ ಮತೀಯ ಸಂಘರ್ಷ ಅಥವಾ ಉಗ್ರ ದಾಳಿ ನಡೆಸುವ ಸಾಧ್ಯತೆಯಿದೆಯೆಂಬ ಗುಪ್ತಚರ ಮಾಹಿತಿ ಹಿನ್ನೆಲೆಯಲ್ಲಿ ಗುಜರಾತ್ ನ ಎಲ್ಲಾ ಬಂದರುಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ಪಾಕಿಸ್ತಾನದಲ್ಲಿ ತರಬೇತಿ ಪಡೆದ ಕಮಾಂಡೋಗಳು ಗಲ್ಫ್ ಆಫ್ ಕಚ್ಚ್ ಪ್ರದೇಶವನ್ನು ಹರಾಮಿ ನಾಲ ಮೂಲಕ ಪ್ರವೇಶಿಸುವ ಸಾಧ್ಯತೆ ಕುರಿತಂತೆ ಕೋಸ್ಟ್ ಗಾರ್ಡ್ ಸೂಚನೆ ದೊರಕಿದ್ದು, ಈ ಕಮಾಂಡೋಗಳು ಜಲಾಂತರ್ಗಾಮಿ ದಾಳಿಗಳಲ್ಲಿ ಪರಿಣತರೆಂದು ತಿಳಿಯಲಾಗಿದೆ’ ಎಂದು ಅದಾನಿ ಪೋರ್ಟ್ಸ್ ಎಂಡ್ ಎಸ್‍ಇಝೆಡ್ ಬಿಡುಗಡೆಗೊಳಿಸಿದ ಹೇಳಿಕೆ ತಿಳಿಸಿದೆ.
ದೀನ್ ದಯಾಳ್ ಬಂದರು ಮಂಡಳಿಯ ಸಿಗ್ನಲ್ ಸುಪರಿಂಟೆಂಡೆಂಟ್ ಕೂಡ ಅಲರ್ಟ್ ಘೋಷಿಸಿ ಗರಿಷ್ಠ ಭದ್ರತೆ ಮತ್ತು ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಕರಾವಳಿ ಸಮೀಪ ಎಲ್ಲಾ ಶಂಕಿತ ವ್ಯಕ್ತಿಗಳು ಹಾಗೂ ಬೋಟುಗಳ ಮೇಲೆ ನಿಗಾ, ಸತತ ಗಸ್ತು ಹಾಗೂ ಸುತ್ತಮುತ್ತಲಿನ ಎಲ್ಲಾ ಕಚೇರಿಗಳು ಹಾಗೂ ಮನೆಗಳಲ್ಲಿ ತಪಾಸಣೆ ಕೈಗೊಳ್ಳುವಂತೆ ಅವರು ನೀಡಿದ ಸೂಚನೆ ತಿಳಿಸಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…