ಅಂತಾರಾಷ್ಟ್ರೀಯ ನ್ಯೂಸ್

ಪಾಕಿಸ್ತಾನದಲ್ಲಿ ಭಾರೀ ಮಳೆ, ತೀವ್ರ ಹಿಮಪಾತ – ಭೂಕುಸಿತದಿಂದಾಗಿ ರಸ್ತೆಗಳು ಬಂದ್‌ ; 37 ಮಂದಿ ಸಾವು  – Vishwanews24

ಪಾಕಿಸ್ತಾನದಲ್ಲಿ ಭಾರೀ ಮಳೆ, ತೀವ್ರ ಹಿಮಪಾತ ; ಭೂಕುಸಿತದಿಂದಾಗಿ ರಸ್ತೆಗಳು ಬಂದ್‌ – 37 ಮಂದಿ ಸಾವು

ಪಾಕಿಸ್ತಾನ: ಪಾಕಿಸ್ತಾನದಲ್ಲಿ ಭಾರೀ ಮಳೆಯಿಂದಾಗಿ, ಅನೇಕ ಮನೆಗಳು ಕುಸಿದು ಕನಿಷ್ಠ 37 ಮಂದಿ ಸಾವನ್ನಪ್ಪಿದ್ದಾರೆ. ಕಳೆದ 48 ಗಂಟೆಗಳಲ್ಲಿ ದೇಶಾದ್ಯಂತ ಭಾರೀ ಮಳೆಯಿಂದಾಗಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡಿದ್ದಾರೆ.

ಮಳೆಗೆ ಹಲವು ಮನೆಗಳು ಕುಸಿದಿದ್ದು, ಭೂಕುಸಿತದಿಂದ ರಸ್ತೆಗಳು ಬಂದ್‌ ಆಗಿವೆ. ಪಾಕಿಸ್ತಾನದಲ್ಲಿ ಭಾರೀ ಹಿಮಪಾತವಾದ ಸಮಯದಲ್ಲೇ ಇದು ಸಂಭವಿಸಿದೆ ಎಂದು ವರದಿಯಾಗಿದೆ.

ಪ್ರಾಂತೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಹೇಳಿಕೆಯ ಪ್ರಕಾರ, ಗುರುವಾರ ರಾತ್ರಿಯಿಂದ, ಅಫ್ಘಾನಿಸ್ತಾನದ ಗಡಿಯಲ್ಲಿರುವ ಖೈಬರ್ ಪಖ್ತುಂಕ್ವಾ ಪ್ರಾಂತ್ಯದ ವಿವಿಧ ಪ್ರದೇಶಗಳಲ್ಲಿ ಮಳೆಯಿಂದಾಗಿ ಸುಮಾರು 23 ಜನರು ಸಾವನ್ನಪ್ಪಿದ್ದಾರೆ. ನೈಋತ್ಯ ಬಲೂಚಿಸ್ತಾನ್ ಪ್ರಾಂತ್ಯದ ಕರಾವಳಿ ನಗರವಾದ ಗ್ವಾದರ್‌ನಲ್ಲಿ ಪ್ರವಾಹದಲ್ಲಿ ಐದು ಜನರು ಸಾವನ್ನಪ್ಪಿದ್ದಾರೆ.

ಇನ್ನು ಬಜಾರ್, ಸ್ವಾತ್, ಲೋವರ್ ದಿರ್, ಮಲಕಂಡ್, ಖೈಬರ್, ಪೇಶಾವರ, ಉತ್ತರ, ದಕ್ಷಿಣ ವಜೀರಿಸ್ತಾನ್ ಮತ್ತು ಲಕ್ಕಿ ಮಾರ್ವತ್ ಸೇರಿದಂತೆ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಹತ್ತು ಜಿಲ್ಲೆಗಳಲ್ಲಿ ಕಳೆದ 48 ಗಂಟೆಗಳಲ್ಲಿ ಧಾರಾಕಾರ ಮಳೆಗೆ 37 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

Vishwa News 24

Recent Posts

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

7 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

55 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 hour ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

2 hours ago