ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡಿದ್ದು, 25ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
ಇಂದು (ನ.9) ನೈಋತ್ಯ ಪಾಕಿಸ್ತಾನ್‌ನ ಕ್ವೆಟ್ಟಾ ರೈಲು ನಿಲ್ದಾಣದ ಬುಕ್ಕಿಂಗ್ ಕೌಂಟರ್ ಹಾಗೂ ಪ್ಲಾಟ್‌ಫಾರಂ ಬಳಿ ಎರಡು ಬಾಂಬ್ ಸ್ಫೋಟಗೊಂಡಿದೆ.
ಪೊಲೀಸ್ ಕಾರ್ಯಾಚರಣೆಯ ಹಿರಿಯ ಅಧೀಕ್ಷಕ ಮುಹಮ್ಮದ್ ಬಲೋಚ್ ಮಾತನಾಡಿ, ಪೇಶಾವರಕ್ಕೆ ಹೋಗುವ ಎಕ್ಸ್ಪ್ರೆಸ್ ರೈಲು ನಿಲ್ದಾಣದಿಂದ ಹೊರಡಲು ಸಿದ್ಧವಾಗಿತ್ತು. ಜೊತೆಗೆ ಪ್ಯಾಸೆಂಜರ್ ರೈಲಿಗಾಗಿ ಹಲವು ಜನ ಕಾಯುತ್ತಿದ್ದರು. ಇದರಿಂದಾಗಿ ನಿಲ್ದಾಣ ಭಾರೀ ಜನಸಂದಣಿಯಿಂದ ಕೂಡಿತ್ತು. ಈ ವೇಳೆ ಅವಘಡ ಸಂಭವಿಸಿದ್ದು, ಒಂದರ ಹಿಂದೆ ಒಂದರಂತೆ ಒಟ್ಟು ಎರಡು ಬಾಂಬ್ ಸ್ಫೋಟಗೊಂಡಿವೆ. ಮೊದಲ ಬಾಂಬ್ ಸ್ಫೋಟಗೊಂಡಾಗ 4 ಜನ ಹಾಗೂ ಎರಡನೇ ಬಾಂಬ್ ಸ್ಫೋಟಗೊಂಡಾಗ 21ಕ್ಕೂ ಜನರು ಸಾವನ್ನಪ್ಪಿದ್ದಾರೆ. ಇನ್ನೂ ಸ್ಫೋಟದಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಆಗಮಿಸಿರುವ ಬಾಂಬ್ ನಿಷ್ಕ್ರಿಯ ದಳ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರೆಸಿದೆ ಎಂದು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…