ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶಹಬಾಜ್ ಷರೀಫ್ – Vishwanews24
ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶಹಬಾಜ್ ಷರೀಫ್ ಅವಿರೋಧವಾಗಿ ಆಯ್ಕೆ – Vishwanews24
ಇಂದು ರಾತ್ರಿ 8 ಗಂಟೆಗೆ ಶಹಬಾಜ್ ಷರೀಫ್ ಪ್ರಮಾಣವಚನ ಸ್ವೀಕಾರ
ಇಸ್ಲಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಶಹಬಾಜ್ ಷರೀಫ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಶನಿವಾರ ಅವಿಶ್ವಾಸ ನಿರ್ಣಯದ ಬಳಿಕ ಪದಚ್ಯುತಗೊಂಡ ಇಮ್ರಾನ್ ಖಾನ್ ಅವರ ಉತ್ತರಾಧಿಕಾರಿಯಾಗಿ ಶಹಬಾಜ್ ಷರೀಫ್ ಪಾಕಿಸ್ತಾನದ ಮುಂದಿನ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಪಾಕಿಸ್ತಾನದ 23ನೇ ಪ್ರಧಾನಿಯಾಗಿ 70 ವರ್ಷದ ಶಹಬಾಜ್ ಷರೀಫ್ ಆಯ್ಕೆಯಾಗಿದ್ದು, ಇಂದು ರಾತ್ರಿ 8 ಗಂಟೆಗೆ ಶಹಬಾಜ್ ಷರೀಫ್ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ.
