Featured

ಪಾಕಿಸ್ತಾನದ ಪ್ರತಿದಾಳಿ ಮಾಡುವ ಸಾಧ್ಯತೆ : ಕರಾವಳಿಯಾದ್ಯಂತ ಹೈ ಅಲರ್ಟ್ ಘೋಷಣೆ – Vishwanews24

ಮಂಗಳೂರು : ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದ ಭೂಬಾಗಕ್ಕೆ ಪ್ರವೇಶಿಸಿ ದಾಳಿ ನಡೆಸಿ, ಉಗ್ರರನ್ನು ಸದೆ ಬಡಿದಿದ್ದು, ಈ ಹಿನ್ನಲೆಯಲ್ಲಿ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ಪ್ರತಿದಾಳಿ ನಡೆಸುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಕರಾವಳಿಯದ್ದಕ್ಕೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಪಾಕಿಸ್ತಾನ ಹಗೆ ತೀರಿಸಲು ಉಗ್ರರನ್ನು ಬಳಸಿ ಪ್ರತಿದಾಳಿ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ. ಆದ್ದರಿಂದ ಕರಾವಳಿಯಲ್ಲಿ ನೌಕ ದಳ, ಕೋಸ್ಟ್ ಗಾರ್ಡ್, ಕೋಸ್ಟಲ್ ಪೊಲೀಸರನ್ನು ಹೈ ಅಲರ್ಟ್ ಮಾಡಲಾಗಿದೆ.

ರಾಜ್ಯದ ಕರಾವಳಿ ಪ್ರದೇಶಗಳಾದ ಮಂಗಳೂರು, ಉಡುಪಿ, ಉತ್ತರಕನ್ನಡದ ಕಾರವಾರದಲ್ಲೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಕಾರವಾರದ ಸೀಬರ್ಡ್ ಕದಂಬ ನೌಕಾನೆಲೆಯಲ್ಲೂ ಪ್ರಥಮ ಹಂತದ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಆಳಸಮುದ್ರದಲ್ಲಿ ನಡೆಯುವ ಚಟುವಟಿಕೆಗಳ ಹದ್ದಿನ ಕಣ್ಣಿಡಲಾಗುತ್ತಿದೆ.

ಸಮುದ್ರದಲ್ಲಿ ನೇವಿ, ಕೋಸ್ಟ್ ಗಾರ್ಡ್ ನಿಂದ ಕಟ್ಟೆಚ್ಚರ ವಹಿಸಲಾಗುತ್ತಿದ್ದ ಗಸ್ತು ಹೆಚ್ಚಿಸಲಾಗಿದೆ. ಸಮುದ್ರದಲ್ಲಿ ಗಸ್ತು ನಡೆಸಲು ಡಾರ್ನಿಯೆರ್ ವಿಮಾನ ಬಳಕೆ ಮಾಡಲಾಗುತ್ತಿದೆ.

ರಜೆಯಲ್ಲಿದ್ದ ನೌಕಾಸಿಬ್ಬಂದಿಗೆ ಕರ್ತವ್ಯಕ್ಕೆ ಹಾಜರಾಗಲು ಸೂಚನೆ ರವಾನಿಸಲಾಗಿದೆ. ಕದಂಬ ನೌಕಾನೆಲೆ ಸುತ್ತಮುತ್ತ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಕಾರವಾರ ಕದಂಬ ನೌಕಾದಳದಿಂದ ಭಾರತ ಗಡಿಗೆ ಭದ್ರತೆಗೆ ನೌಕೆಗಳು ಈಗಾಗಲೇ ತೆರಳಿವೆ.

ಸಮುದ್ರದಲ್ಲಿ ಸಂಚರಿಸುವ ಬೋಟ್ ಗಳ ಮೇಲೂ ನಿಗಾ ಇರಿಸಲಾಗಿದ್ದು ಸಂಶಯಾಸ್ಪದ ಹಡಗು, ದೋಣಿಗಳು ಕಂಡು ಬಂದಲ್ಲಿ ಮಾಹಿತಿ ನೀಡಲು ಮೀನುಗಾರರಿಗೆ ಸೂಚಿಸಲಾಗಿದೆ.

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago