ಇಸ್ಲಾಮಾಬಾದ್: ಪಾಕಿಸ್ತಾನದ ಬಳಿ ಇರುವ ಅಣು ಬಾಂಬ್’ಗಳ ಮೂಲಕ ಭಾರತದ ನಿರ್ದಿಷ್ಟ ನಗರವನ್ನು ಗುರಿಯನ್ನಾಗಿಸಿಟ್ಟುಕೊಂಡು ಧ್ವಂಸ ಮಾಡಬಹುದು ಎಂದು ಪಾಕ್ ರೈಲ್ವೆ ಸಚಿವ ಶೇಖ್ ರಶೀದ್ ಅಹ್ಮದ್ ಹೇಳಿದ್ದಾರೆ.
ನಮ್ಮ ಬಳಿ 125-250 ಗ್ರಾಂ ತೂಕದ ಅಣುಬಾಂಬ್ಗಳಿವೆ. ಇವನ್ನು ಪ್ರಯೋಗಿಸುವ ಮೂಲಕ ಭಾರತದ ನಿರ್ದಿಷ್ಟ ನಗರದಲ್ಲಿ ಇಚ್ಛಿಸಿದಷ್ಟು ಪ್ರಮಾಣದ ಹಾನಿಯನ್ನುಂಟು ಮಾಡಬಲ್ಲೆವು. ಪಾಕ್ ಮೇಲೆ ದಾಳಿ ಮಾಡುವ ದುಸ್ಸಾಹಸ ಮಾಡಿದರೆ, ಇಂತಹ ಅನಾಹುತಗಳನ್ನು ಎದುರಿಸುವ ಅನಿವಾರ್ಯತೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಸಿಲುಕಿಕೊಳ್ಳುತ್ತಾರೆ ಎಂದು ಹೇಳಿದರು.
ಕೆಲ ದಿನಗಳ ಹಿಂದಷ್ಟೇ ಶೇಖ್ ರಶೀದ್ ಅಹ್ಮದ್, ಅಕ್ಟೋಬರ್ ಅಥವಾ ಡಿಸೆಂಬರ್ನಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಪೂರ್ಣ ಪ್ರಮಾಣದ ಯುದ್ಧವಾಗುವ ಸಾಧ್ಯತೆ ಹೆಚ್ಚಾಗಿದೆ. ಭಾರತವು ಪಾಕಿಸ್ತಾನದ ಜತೆಗೆ ಯುದ್ಧ ನಡೆಯದಂತೆ ತಡೆಯಬೇಕು. ಹಾಗೊಂದು ವೇಳೆ ಯುದ್ಧವಾದರೆ ಅಣ್ವಸ್ತ್ರ ಹೊಂದಿದ ಎರಡೂ ದೇಶಗಳ ಮಧ್ಯದ ಕೊನೆಯ ಯುದ್ಧ ಇದೇ ಆಗಲಿದೆ ಎಂದು ಹೇಳಿಕೆ ನೀಡಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…