ಮೈಸೂರು: ಪೆಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಪಾಕಿಸ್ತಾನದ ಮೇಲೆ ಯುದ್ಧ ಮಾಡುವ ಅಗತ್ಯವಿಲ್ಲ. ಆದರೆ ಬಿಗಿಯಾದ ಭದ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಭದ್ರತಾ ವೈಫಲ್ಯತೆ ಇದೆ ಎಂದು ನಾನು ಆರಂಭದಲ್ಲೇ ಹೇಳಿದ್ದೆ. ಈಗ ಕೇಂದ್ರ ಸರ್ಕಾರವೂ ಅದನ್ನು ಒಪ್ಪಿಕೊಂಡಿದೆ. ಅಲ್ಲಿಗೆ ನಾನು ಹೇಳಿದ್ದು ನಿಜವಾಗಿದೆ ಎಂದರು.
ಭದ್ರತಾ ವ್ಯವಸ್ಥೆಯನ್ನು ಬಿಗಿ ಮಾಡಬೇಕು. ನಾವು ಯುದ್ಧದ ಪರ ಇಲ್ಲ, ಶಾಂತಿ ವ್ಯವಸ್ಥೆ ಇರಬೇಕು. ಜನರಿಗೆ ಭದ್ರತೆ ಇರಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು. ಜಮ್ಮು-ಕಾಶ್ಮೀರ ಪ್ರವಾಸಿ ಸ್ಥಳ. ಅಲ್ಲಿ ಭದ್ರತೆಯನ್ನು ಬಿಗಿಗೊಳಿಸಬೇಕಿತ್ತು. ಪುಲ್ವಾಮಾ ದಾಳಿಯ ಬಳಿಕ ಎಚ್ಚರಿಕೆಯಿಂದ ಇರಬೇಕಿತ್ತು. ಗುಪ್ತಚರ ಹಾಗೂ ಭದ್ರತೆಯ ವೈಫಲ್ಯ ಎದ್ದುಕಾಣುತ್ತಿದೆ ಎಂದರು.
ಪಾಕ್ ಪ್ರಜೆಗಳನ್ನು ವಾಪಸ್ ಕಳುಹಿಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ವಿಚಾರದಲ್ಲಿ ಕೇಂದ್ರಕ್ಕೆ ಸಹಕಾರ ನೀಡುತ್ತೇವೆ. ಇಲ್ಲಿ ಯಾರೆಲ್ಲೆ ಪಾಕಿಸ್ತಾನದ ಪ್ರಜೆಗಳಿದ್ದಾರೋ ಅವರ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕೊಡುತ್ತೇವೆ ಎಂದು ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…