Featured

ಪಾಕಿಸ್ತಾನದ ವಿರುದ್ಧ ಎಲ್ಲ ಕ್ರೀಡೆಗಳನ್ನು ಕೈಬಿಡಬೇಕು: ಸೌರವ್ ಗಂಗೂಲಿ – Vishwanews24

ಮುಂಬೈ: ಪುಲ್ವಾಮ ಉಗ್ರರ ದಾಳಿಯಲ್ಲಿ ಪಾಕಿಸ್ತಾನದ ಪಾತ್ರಕ್ಕೆ ಸಂಬಂಧಿಸಿದಂತೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಕೇವಲ ಕ್ರಿಕೆಟ್ ಮಾತ್ರವಲ್ಲದೆ ಪಾಕಿಸ್ತಾನ ಜತೆಗಿನ ಎಲ್ಲ ಕ್ರೀಡಾ ಸಂಬಂಧಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
ಪುಲ್ವಾಮ ಉಗ್ರ ದಾಳಿಯ ಪ್ರತಿಭಟನಾರ್ಥವಾಗಿ ಪಾಕಿಸ್ತಾನದ ವಿರುದ್ದ ವಿಶ್ವಕಪ್ ಪಂದ್ಯಗಳನ್ನುಭಾರತ ಬಹಿಷ್ಕರಿಸಬೇಕು ಎಂಬ ಚರ್ಚೆ ವ್ಯಾಪಕವಾಗಿರುವಂತೆಯೇ ಇದಕ್ಕೆ ಧನಿ ಗೂಡಿಸಿರುವ ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ, ಕ್ರಿಕೆಟ್ ಮಾತ್ರವಲ್ಲದೇ ಎಲ್ಲ ಕ್ರೀಡೆಗಳಲ್ಲೂ ಪಾಕ್ ಜತೆಗಿನ ಸಂಬಂಧ ಕಡಿದುಕೊಳ್ಳಬೇಕು ಎಂದು ಹೇಳಿದ್ದಾರೆ.
‘ವಿಶ್ವಕಪ್ 10 ತಂಡಗಳ ಟೂರ್ನಿ ಆಗಿದ್ದು, ಲೀಗ್ ಹಂತದಲ್ಲಿ ಎಲ್ಲ ತಂಡಗಳು ಎದುರಾಗಲಿದೆ. ಹಾಗಾಗಿ ಪ್ರತಿಭಟನೆಯ ಭಾಗವಾಗಿ ಪಾಕಿಸ್ತಾನ ವಿರುದ್ಧದ ಪಂದ್ಯವನ್ನು ಕೈಬಿಡಬೇಕು ಎಂಬುದು ನನ್ನ ಅನಿಸಿಕೆಯಾಗಿದೆ ಎಂದು ಗಂಗೂಲಿ ಹೇಳಿದರು.  ಅಂತೆಯೇ ಭಾರತವಿಲ್ಲದೆ ವಿಶ್ವಕಪ್ ಆಯೋಜಿಸುವುದು ಐಸಿಸಿ ಪಾಲಿಗೆ ನಿಜಕ್ಕೂ ಕಠಿಣವಾಗಲಿದೆ. ಕ್ರಿಕೆಟ್ ನಲ್ಲಿ ಭಾರತ ಪ್ರಬಲ ರಾಷ್ಟ್ರವಾಗಿದೆ. ವೈಯುಕ್ತಿಕವಾಗಿಯೂ ಸ್ಪಷ್ಟ ಸಂದೇಶವೊಂದು ರವಾನಿಸಬೇಕಿದೆ ಎಂದು ದಾದಾ ಹೇಳಿದ್ದಾರೆ.
ಭಾರತೀಯ ಜನತೆಯಿಂದ ಮೂಡಿಬಂದಿರುವ ಜನಾಗ್ರಹ ನಿಜಕ್ಕೂ ಸರಿಯೆನಿಸಿದೆ. ಪಾಕಿಸ್ತಾನ ವಿರುದ್ಧ ದ್ವಿಪಕ್ಷೀಯ ಸರಣಿ ಸಾಧ್ಯವೇ ಇಲ್ಲ. ಕೇವಲ ಕ್ರಿಕೆಟ್ ಮಾತ್ರವಲ್ಲದೆ ಫುಟ್ಬಾಲ್, ಹಾಕಿ ಹೀಗೆ ಎಲ್ಲ ಕ್ರೀಡೆಗಳಿಂದಲೂ ಹಿಂದೆ ಸರಿಯಬೇಕು ಎಂದು ಗಂಗೂಲಿ ನುಡಿದರು.
Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

23 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

23 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

24 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

1 day ago