Featured

ಪಾಕಿಸ್ತಾನವು ತನ್ನ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ : ಪಾಕ್ ಪ್ರಧಾನಿ ಇಮ್ರಾನ್ ಖಾನ್

ಇಸ್ಲಾಮಾಬಾದ್: ಪಾಕಿಸ್ತಾನವು ತನ್ನ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.

ಕಾಶ್ಮೀರ ಪಾಕಿಸ್ತಾನದ “ಜೀವನಾಡಿ” ಮತ್ತು ಅದರ ವಿಶೇಷ ಸ್ಥಾನಮಾನ ರದ್ದುಪಡಿಸಿರುವ ಭಾರತದ  ನಿರ್ಧಾರವು ದೇಶದ ಭದ್ರತೆ ಮತ್ತು ಸಮಗ್ರತೆಗೆ ಸವಾಲೊಡ್ಡುತ್ತದೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ

ಆಗಸ್ಟ್ 5 ರಂದು ಭಾರತ ಜಮ್ಮು ಮತ್ತು ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ರದ್ದುಪಡಿಸಿದ ನಂತರ ಕಾಶ್ಮೀರದ ಬಗ್ಗೆ ವಿಶ್ವ ಸಮುದಾಯಕ್ಕೆ ಮನವರಿಕೆ ಮಾಡಲು ವಿಶ್ವಸಂಸ್ಥೆಯಲ್ಲಿ  ತಮ್ಮ ಸರ್ಕಾರವು ಪೂರ್ವಭಾವಿ ರಾಜತಾಂತ್ರಿಕ ಅಭಿಯಾನವನ್ನು ಪ್ರಾರಂಭಿಸಿದೆ ಎಂದು ಖಾನ್ ಹೇಳಿದ್ದಾರೆ. ಅವರು ಪಾಕಿಸ್ತಾನದ ಸೇನಾ ಹುತಾತ್ಮರ ದಿನದಂದು ತಮ್ಮ ಸಂದೇಶವನ್ನು ನೀಡುತ್ತಾ ಮೇಲಿನ ಮಾತುಗಳನ್ನಾಡಿದ್ದಾರೆ.

ಪಾಕಿಸ್ತಾನದ ಪಾಲಿಗೆ ಕಾಶ್ಮೀರವು ಅದರ ಜೀವನಾಡಿಯಾಗಿದೆ.ಹಾಗಾಗಿ ಅದರ ವಿಶೇಷ ಸ್ಥಾನಮಾನವನ್ನು ಬದಲಾಯಿಸಿರುವುದು ದೇಶದ ಭದ್ರತೆ ಮತ್ತು ಸಮಗ್ರತೆಗೆ ಸವಾಲುಗಳನ್ನು ಒಡ್ಡುತ್ತದೆ” ಎಂದು ಖಾನ್ ಹೇಳಿದರು.

“ಭಾರತದ ಪರಮಾಣು ಸುರಕ್ಷತೆ ವಿಚಾರವನ್ನು ಗಂಭೀರವಾಗಿ ಪರಿಗಣಿಸುವಂತೆ ನಾನು ಅಂತರರಾಷ್ಟ್ರೀಯ ಸಮುದಾಯವನ್ನು ಕೋರಿದ್ದೇನೆ … ಇದು ದಕ್ಷಿಣ ಏಷ್ಯಾ ಪ್ರದೇಶವನ್ನು ಮಾತ್ರವಲ್ಲದೆ ಇಡೀ ಪ್ರಪಂಚದ ಮೇಲೆ ಪರಿಣಾಮ ಬೀರುವ ವಿಷಯವಾಗಿದೆ” ಎಂದು ಅವರು ಹೇಳಿದರು.

ಪಾಕಿಸ್ತಾನವು ಯುದ್ಧವನ್ನು ಬಯಸುವುದಿಲ್ಲ ಎಂದು ನಾನು ಜಗತ್ತಿಗೆ ತಿಳಿಸಿದ್ದೇನೆ, ಆದರೆ ಅದೇ ಸಮಯದಲ್ಲಿ, ಪಾಕಿಸ್ತಾನವು ತನ್ನ ಭದ್ರತೆ ಮತ್ತು ಸಮಗ್ರತೆಗೆ ಧಕ್ಕೆಯಾದರೆ ಸಹಿಸಲು ಸಾಧ್ಯವಿಲ್ಲ”ಖಾನ್ ಹೇಳಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago