ಢಾಕಾ: ‘ಪಾಕಿಸ್ತಾನವು ಸದ್ಯದ ಮಟ್ಟಿಗೆ ವಿಶ್ವದ ಅತ್ಯಂತ ಸುರಕ್ಷಿತ ಸ್ಥಳಗಳಲ್ಲೊಂದಾಗಿದೆ’ ಎಂದು ವೆಸ್ಟ್ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ತಿಳಿಸಿದ್ದಾರೆ.
‘ಪಾಕಿಸ್ತಾನಕ್ಕೆ ಬರುವ ಆಟಗಾರರಿಗೆ ಬಿಗಿ ಭದ್ರತೆ ಒದಗಿಸಲು ಸಿದ್ಧವಿರುವುದಾಗಿ ಅಲ್ಲಿನ ಸರ್ಕಾರ ಹೇಳಿದೆ. ಹೀಗಾಗಿ ಆ ದೇಶಕ್ಕೆ ಹೋಗಿ ಕ್ರಿಕೆಟ್ ಆಡಲು ಭಯಪಡುವ ಅಗತ್ಯವಿಲ್ಲ. ಬಾಂಗ್ಲಾದೇಶದಲ್ಲೂ ನಿರ್ಭೀತಿಯಿಂದ ಕ್ರಿಕೆಟ್ ಆಡಬಹುದು’ ಎಂದಿದ್ದಾರೆ.
ಎಡಗೈ ಬ್ಯಾಟ್ಸ್‌ಮನ್ ಗೇಲ್, ಬಾಂಗ್ಲಾದೇಶ ಪ್ರೀಮಿಯರ್ ಲೀಗ್‌ನಲ್ಲಿ (ಬಿಪಿಎಲ್) ಚಟ್ಟೊಗ್ರಮ್ ಚಾಲೆಂಜರ್ಸ್ ತಂಡದ ಪರ ಆಡುತ್ತಿದ್ದಾರೆ.
2009ರಲ್ಲಿ ಲಾಹೋರ್‌ನ ಗಡಾಫಿ ಕ್ರೀಡಾಂಗಣದ ಬಳಿ ಶ್ರೀಲಂಕಾ ಆಟಗಾರರಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಆ ಘಟನೆಯ ನಂತರ ಟೆಸ್ಟ್ ಆಡುವ ಎಲ್ಲಾ ರಾಷ್ಟ್ರಗಳೂ ಪಾಕಿಸ್ತಾನದಲ್ಲಿ ಕ್ರಿಕೆಟ್ ಸರಣಿ ಆಡಲು ಹಿಂದೇಟು ಹಾಕಿದ್ದವು.
ಹೋದ ವರ್ಷದ ಅಂತ್ಯದಲ್ಲಿ ಪಾಕಿಸ್ತಾನ ಪ್ರವಾಸ ಕೈಗೊಂಡಿದ್ದ ಶ್ರೀಲಂಕಾ ತಂಡ ಆತಿಥೇಯರ ವಿರುದ್ಧ ಏಕದಿನ, ಟ್ವೆಂಟಿ–20 ಮತ್ತು ಟೆಸ್ಟ್ ಸರಣಿಗಳನ್ನು ಆಡಿತ್ತು.
ಮೂರು ಪಂದ್ಯಗಳ ಟ್ವೆಂಟಿ–20 ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಗಳನ್ನು ಆಡಲು ಪಾಕಿಸ್ತಾನಕ್ಕೆ ಬರುವಂತೆ ಪಾಕಿಸ್ತಾನ ಕ್ರಿಕೆಟ್ ಮಂಡಳಿಯು (ಪಿಸಿಬಿ) ಈಗ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಗೆ (ಬಿಸಿಬಿ) ಆಹ್ವಾನ ನೀಡಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…