Featured

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಸ್ವತಂತ್ರ್ಯ ಕಾಶ್ಮೀರವನ್ನಾಗಿ ಘೋಷಣೆ ಮಾಡಿ :ಕಮಲ್ ಹಾಸನ್ – Vishwanews24

ಚೆನ್ನೈ: ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಸ್ವತಂತ್ರ್ಯ ಕಾಶ್ಮೀರವನ್ನಾಗಿ ಘೋಷಣೆ ಮಾಡಿ, ಕಾಶ್ಮೀರದಲ್ಲಿ ಜನಾಭಿಪ್ರಾಯ ಸಂಗ್ರಹಣೆ ಮಾಡಬೇಕು ಎಂದು ಖ್ಯಾತ ನಟ ಹಾಗೂ ಎಂಎನ್ಎಂ ಪಕ್ಷದ ಸಂಸ್ಛಾಪಕ ಕಮಲ್ ಹಾಸನ್ ಹೇಳಿದ್ದಾರೆ.
ಚೆನ್ನೈನಲ್ಲಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡು ಮಾತನಾಡಿದ ಕಮಲ್ ಹಾಸನ್ ಅವರು, ಭಾರತ ಮತ್ತು ಪಾಕಿಸ್ತಾನದ ರಾಜಕಾರಣಿಗಳು ಜವಾಬ್ದಾರಿತನದಿಂದ ವರ್ತಿಸಿದರೆ, ಖಂಡಿತಾ ಪುಲ್ವಾಮ ಉಗ್ರ ದಾಳಿಯಂತಹ ಘಟನೆಗಳು ನಡೆಯುವುದಿಲ್ಲ. ಗಡಿ ಪ್ರದೇಶದಲ್ಲಿ ಹಿಂಸಾಚಾರ ತಲೆ ಎತ್ತುವುದಿಲ್ಲ ಎಂದು ಹೇಳಿದರು.
ಆಜಾದ್ ಕಾಶ್ಮೀರದ ರೈಲುಗಳಲ್ಲಿ ಜಿಹಾದಿಗಳ ಫೋಟೊವನ್ನಿಟ್ಟು ಅವರನ್ನು ಹೀರೊಗಳಂತೆ ಮೆರೆಸುತ್ತಾರೆ. ಇದೊಂದು ಮೂರ್ಖತನದ ಕೆಲಸ. ಇತ್ತ ಭಾರತವೂ ಇಂಥದ್ದೇ ಮೂರ್ಖತನದ ಕೆಲಸ ಮಾಡುತ್ತದೆ. ಇದು ಸರಿಯಲ್ಲ, ಭಾರತ ಇದಕ್ಕಿಂತ ಉತ್ತಮ ದೇಶ ಎಂದು ಸಾಬೀತು ಮಾಡಬೇಕಾದರೆ ನಾವು ಈ ರೀತಿ ವರ್ತಿಸಬಾರದು. ಇಲ್ಲಿಯೇ ರಾಜಕೀಯ ಆರಂಭವಾಗುವುದು. ರಾಜಕೀಯದ ಹೊಸ ರೀತಿ ಆರಂಭವಾಗುವುದು ಎಂದಿದ್ದಾರೆ.
ನನ್ನ ಪ್ರಕಾರ ಕಣಿವೆ ರಾಜ್ಯದಲ್ಲಿ ಜನಾಭಿಪ್ರಾಯದ ಸಂಗ್ರಹಣ ಅನಿವಾರ್ಯವಾಗಿದೆ. ಅಲ್ಲಿನ ಜನರ ಆಶೋತ್ತರಗಳಿಗೆ ಕೇಂದ್ರ ಸರ್ಕಾರ ತುರ್ತಾಗಿ ಸ್ಪಂದಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆಯಾಗುವ ಸಾಧ್ಯತೆಗಳಿವೆ. ಪುಲ್ವಾಮ ಉಗ್ರ ದಾಳಿಯಲ್ಲಿ ಸೈನಿಕರ ಸಾವು ನಿಜಕ್ಕೂ ನನಗೆ ಅತೀವ ನೋವು ತಂದಿದೆ. ಸೈನಿಕರು ಕಾಶ್ಮೀರಕ್ಕೆ ಸಾಯಲೆಂದೇ ಹೋಗುತ್ತಾರೆಯೇ..? ಇದಕ್ಕೆ ಪರಿಹಾರವೇ ಇಲ್ಲವೇ.. ಸರ್ಕಾರವೇಕೆ ಅಲ್ಲಿನ ಜನಗಳ ಜನಾಭಿಪ್ರಾಯಕ್ಕೆ ಹಿಂದೇಟು ಹಾಕುತ್ತಿದೆ ಎಂಬುದು ತಮಗೆ ತಿಳಿಯುತ್ತಿಲ್ಲ ಎಂದು ಹೇಳಿದರು.
ಅಂತೆಯೇ ಗಡಿಯಲ್ಲಿ ಸೈನಿಕರು ಸತ್ತರೆ, ಉಭಯ ದೇಶಗಳ ರಾಜಕಾರಣಿಗಳು ಸಂಯಮದಿಂದ ವರ್ತಿಸಬೇಕು. ಅದನ್ನು ಬಿಟ್ಟು ಪ್ರಚೋಧನಾತ್ಮಕ ಹೇಳಿಕೆಗಳನ್ನು ನೀಡಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸ ಮಾಡಬಾರದು. ಪಿಒಕೆಯನ್ನು ಸ್ವತಂತ್ರ್ಯ ಕಾಶ್ಮೀರವಾಗಿ ಘೋಷಣೆ ಮಾಡಿ ಭಾರತದ ಅವಿಭಾಜ್ಯ ಅಂಗವಾಗಿರುವ ಕಾಶ್ಮೀರದಲ್ಲಿ ಸರ್ಕಾರ ಜನಾಭಿಪ್ರಾಯ ಸಂಗ್ರಹಣೆಗೆ ಮುಂದಾಗಬೇಕು. ಅವರ ಆಶೋತ್ತರಗಳಿಗೆ ಸ್ಪಂದಿಸಿ ಹೊಸ ರಾಜಕೀಯ ವ್ಯವಸ್ಛೆ ಮತ್ತು ಹೊಸ ಸಂಸ್ಕೃತಿಯನ್ನು ಬೆಳಸಬೇಕು ಎಂದು ಹೇಳಿದರು.
Vishwa News 24

Recent Posts

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

7 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

46 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago