ವಿಜಯಪುರ: ಇನ್ನು ಮುಂದೆ ದೇಶದಲ್ಲಿ ಯಾರಾದರೂ ದೇಶದ ವಿರುದ್ಧ ಮಾತನಾಡಿದರೆ ಅವರಿಗೆ ಗುಂಡಿನೇಟೇ ಗತಿ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ರಾ. ಪಾಟೀಲ ಯತ್ನಾಳ ಎಚ್ಚರಿಕೆ ನೀಡಿದ್ದಾರೆ.
ವಿಜಯಪುರದಲ್ಲಿ ಬಿಜೆಪಿ ಆಯೋಜಿಸಿದ್ದ ಪೌರತ್ವ ಕಾಯಿದೆ ಜನಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಮಣ್ಣಿನ ಮಗ ದೇವೇಗೌಡ, ಕಣ್ಣೀರಿನ ಮಗ ಕುಮಾರಸ್ವಾಮಿ, ಮಮತಾ ಬ್ಯಾನರ್ಜಿ ಇಂದು ಎಲ್ಲರೂ ಭಾರತ ಮಾತಾ ಕಿ ಜೈ ಎನ್ನುತ್ತಿದ್ದಾರೆ. ನೀವು ಒಪ್ಪಿಕೊಳ್ಳಿ ಬಿಡಿ, ಕಾಯ್ದೆ ಜಾರಿ ಆಗಿದೆ. ಕಾಶ್ಮೀರದಲ್ಲಿ 370 ನೇ ವಿಧಿ ತೆಗೆದಿದ್ದೇವೆ ಇದೇನು ದೊಡ್ಡದು? ಪೌರತ್ವ ಕಾಯ್ದೆ ಬಂತು ಇನ್ನು ಮುಂದೆ ನಾವಿಬ್ಬರು-ನಮಗಿಬ್ಬರು ಕಾಯ್ದೆ ಬರುತ್ತೆ,” ಎಂದು ಜನಸಂಖ್ಯೆ ನಿಯಂತ್ರಣ ಕಾಯಿದೆ ಜಾರಿಯಾಗುವ ಬಗ್ಗೆ ಸುಳಿವು ನೀಡಿದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಅವರ ಸಂವಿಧಾನವನ್ನು ನಾವು ಗೌರವಿಸಲೇಬೇಕು. ನೀವು ಎಷ್ಟೇ ಜಿಗಿದಾಡಿದರೂ ಇನ್ನು 25 ವರ್ಷ ಪ್ರಧಾನಿ ಮೋದಿ ಹಾಗೂ ಅಮಿತಾ ಶಾ ಅವರನ್ನು ಕೆಳಗಿಳಿಸಲು ಆಗಲ್ಲ ಎಂದು ಭವಿಷ್ಯ ನುಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…