Featured

ಪಾಕಿಸ್ತಾನ ಉಗ್ರರ ವಿರುದ್ಧ ಕ್ರಮ ಕೈಗೊಂಡರೆ ಅದಕ್ಕೆ ನಮ್ಮ ಬೆಂಬಲವಿದೆ : ಡೊನಾಲ್ಡ್ ಟ್ರಂಪ್ -Vishwanews24

ವಾಷಿಂಗ್ಟನ್: ಪಾಕಿಸ್ತಾನ ಉಗ್ರರ ವಿರುದ್ಧ ಕ್ರಮ ಕೈಗೊಂಡರೆ ಅದಕ್ಕೆ ನಮ್ಮ ಬೆಂಬಲವಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಶ್ವೇತಭವನ, ಪಾಕಿಸ್ತಾನ ಉಗ್ರರ ವಿರುದ್ಧ ಕ್ರಮ ಕೈಗೊಂಡರೆ ಅದಕ್ಕೆ ನಮ್ಮ ಬೆಂಬಲವಿದೆ. ಆದರೆ ಈ ಕಾರ್ಯ ಕೇವಲ ಕಣ್ಣೊರೆಸುವ ತಂತ್ರಗಾರಿಕೆಯಾಗಬಾರದು. ಪಾಕಿಸ್ತಾನದೊಂದಿಗೆ ಹಳಿಸಿರುವ ಬಾಂಧವ್ಯವನ್ನು ಸರಿಪಡಿಸಿಕೊಳ್ಳಲು ಅಮೆರಿಕ ಸಿದ್ಧವಿದೆ. ಆದರೆ ಪಾಕಿಸ್ತಾನ ತನ್ನ ನೆಲದಲ್ಲಿರುವ ಉಗ್ರರರನ್ನು ಮೊದಲು ಮಟ್ಟ ಹಾಕಬೇಕು. ಈ ಕುರಿತ ಪ್ರಾಮಾಣಿಕ ಪ್ರಯತ್ನವಾದರೆ ಮಾತ್ರ ಪಾಕಿಸ್ತಾನಕ್ಕೆ ಅಮೆರಿಕದ ಬೆಂಬಲ ವಿರಲಿದೆ ಎಂದು ಸ್ಪಷ್ಟಪಡಿಸಿದೆ.

ಈ ಹಿಂದೆ ಭಾರತ ಸರ್ಕಾರ ನೀಡಿದ್ದ ಡಾಸಿಯರ್ ಹೊರತಾಗಿಯೂ ಯಾವುದೇ ಕ್ರಮ ಕೈಗೊಳ್ಳದ ಪಾಕಿಸ್ತಾನ, ಇದೀಗ ಇಮ್ರಾನ್ ಖಾನ್ ಅವರ ಅಮೆರಿಕ ಪ್ರವಾಸ ಹತ್ತಿರವಾಗುತ್ತಲೇ ಉಗ್ರ ಹಫೀಜ್ ಸಯ್ಯೀದ್ ನನ್ನು ಬಂಧಿಸಿದೆ. ಆ ಮೂಲಕ ಪರೋಕ್ಷವಾಗಿ ಪರೋಕ್ಷವಾಗಿ ಅಮೆರಿಕವನ್ನು ಸಂತೈಸುವ ಕ್ರಮಕ್ಕೆ ಮುಂದಾಗಿದೆ. ಅಲ್ಲದೆ ಪಾಕಿಸ್ತಾನ ಸರ್ಕಾರಕ್ಕೆ ಅಮೆರಿಕ ನೀಡುತ್ತಿದ್ದ, ರಕ್ಷಣಾ ಪರಿಹಾರ ಧನ ಕೂಡ ಸ್ಥಗಿತವಾಗಿದ್ದು, ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಪಾಕಿಸ್ತಾನಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಇದೇ ಕಾರಣಕ್ಕೆ ಪಾಕಿಸ್ತಾನ ಉಗ್ರ ಹಫೀಜ್ ಸಯ್ಯೀದ್ ಬಂಧನದ ಮೂಲಕ ವಿಶ್ವ ಸಮುದಾಯವನ್ನು ಸಂತೈಸುವ ಕೆಲಸಕ್ಕೆ ಮುಂದಾಗಿದೆ.

ಉಗ್ರ ಹಫೀಜ್ ಸಯ್ಯೀದ್ ನನ್ನು ಬಂಧಿಸಿದ ಪಾಕಿಸ್ತಾನ ಸರ್ಕಾರದ ಕ್ರಮಕ್ಕೆ ಅಮೆರಿಕ ಸರ್ಕಾರ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ಉಗ್ರನ ಬಂಧನವನ್ನು ಕಣ್ಣೊರೆಸುವ ತಂತ್ರಗಾರಿಕೆ ಎಂದು ಕಿಡಿಕಾರಿದೆ.

 

 

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

4 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

4 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

4 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

4 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

5 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

5 hours ago