Featured

ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ಭಾರತೀಯ ವಿಮಾನಗಳ ಹಾರಾಟಕ್ಕೆ ಇದ್ದ ನಿರ್ಬಂಧ ತೆರವು -Vishwanews24

ಇಸ್ಲಾಮಾಬಾದ್‌: ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ಭಾರತೀಯ ನಾಗರಿಕ ವಿಮಾನಗಳ ಹಾರಾಟಕ್ಕೆ ಇದ್ದ ನಿರ್ಬಂಧವನ್ನು ಮಂಗಳವಾರ ತೆಗೆದು ಹಾಕಿದೆ.

ಬಾಲಕೋಟ್ ಏರ್ ಸ್ಟ್ರೈಕ್ ಬಳಿಕ ಭಾರತಕ್ಕೆ ನಿರ್ಬಂಧಿಸಲಾಗಿದ್ದ ಪಾಕಿಸ್ತಾನ ವೈಮಾನಿಕ ವಲಯ ಬಳಕೆಯನ್ನು ಮತ್ತೆ ಪುನಾರಂಭ ಮಾಡಿದೆ. ಈ ಹಿಂದೆ ಏರ್ ಸ್ಟ್ರೈಕ್ ಬಳಿಕ ಪಾಕಿಸ್ತಾನದ ಮೇಲೆ ಭಾರತ ಇನ್ನಷ್ಟು ವೈಮಾನಿಕ ದಾಳಿ ನಡೆಸುವ ಸಾಧ್ಯತೆ ಇದೆ ಎನ್ನುವ ಆತಂಕದಿಂದಾಗಿ ಪಾಕಿಸ್ತಾನ ಸರ್ಕಾರವು ತನ್ನ ಏರೋಸ್ಪೇಸ್ ಬಳಕೆಯನ್ನು ಭಾರತಕ್ಕೆ ನಿರ್ಬಂಧಿಸಿತ್ತು. ಪುಲ್ವಾಮಾ ದಾಳಿ ಬಳಿಕ ಫೆಬ್ರುವರಿ 26ರಂದು ಭಾರತೀಯ ವಾಯುಪಡೆ ವಿಮಾನಗಳು, ಬಾಲಕೋಟ್‌ ಪ್ರದೇಶದಲ್ಲಿ ಜೈಶ್‌ ಎ ಮೊಹಮ್ಮದ್‌(ಜೆಇಎಂ)ಭಯೋತ್ಪಾದಕರ ಸಂಘಟನೆ ತರಬೇತಿ ಕೇಂದ್ರದ ಮೇಲೆ ದಾಳಿ ನಡೆಸಿದ ನಂತರದಲ್ಲಿ ಪಾಕಿಸ್ತಾನ ತನ್ನ ವಾಯುಪ್ರದೇಶದಲ್ಲಿ ವಿಮಾನ ಹಾರಾಟಕ್ಕೆ ಸಂಪೂರ್ಣ ತಡೆಯೊಡ್ಡಿತ್ತು.

ಇದರಿಂದ ಪಾಕಿಸ್ತಾನ ಹಾಗೂ ಇತರೆ ದೇಶಗಳ ನಾಗರಿಕ ವಿಮಾನಯಾನ ಹಾರಾಟ ಕೂಡ ಪಾಕಿಸ್ತಾನದ ಏರೋಸ್ಪೇಸ್ ನಲ್ಲಿ ರದ್ದಾಗಿತ್ತು. ಹೀಗಾಗಿ ಪಾಕಿಸ್ತಾನ ತನ್ನ ವಾಯುಗಡಿ ತೆರೆಯುವಂತೆ ಅಂತಾರಾಷ್ಟ್ರೀಯ ಸಮುದಾಯದಿಂದ ವ್ಯಾಪಕ ಒತ್ತಡ ಕೇಳಿ ಬಂದಿತ್ತು. ಭಾರತೀಯ ವಾಯು ಸೇನೆಯ ವಾಯುದಾಳಿ ನಡೆದ ನಾಲ್ಕು ತಿಂಗಳ ಬಳಿಕ ಇದೀಗ ಪಾಕಿಸ್ತಾನ ಕೊನೆಗೂ ನಾಗರಿಕ ವಿಮಾನ ಸೇವೆಗೆ ತನ್ನ ವಾಯುಗಡಿಯನ್ನು ತೆರೆದಿದೆ.

ವಿದೇಶಿ ವಿಮಾನಗಳು ಮಾತ್ರವಲ್ಲದೇ ಭಾರತೀಯ ವಿಮಾನಗಳು ಕೂಡ ಈಗ ಪಾಕಿಸ್ತಾನದ ಏರೋಸ್ಪೇಸ್‌’ನಲ್ಲಿ ಹಾರಾಡಬಹುದಾಗಿದೆ. ಕಳೆದ ತಿಂಗಳು ಕಿರ್ಗಿಸ್ತಾನದಲ್ಲಿ ನಡೆದ ಶಾಂಘೈ ಸರ್ಕಾರ ಒಕ್ಕೂಟ ಸಭೆಯಲ್ಲಿ ಭಾಗವಹಿಸಲು ಮೋದಿ ತೆರಳುವಾಗ ಪಾಕಿಸ್ತಾನ ಬದಲಿಗೆ ಬೇರೆ ಮಾರ್ಗವನ್ನು ಬಳಸಿದ್ದರು.

ಭಾರತ ಮನವಿ ಸಲ್ಲಿಸಿದರೆ ಪ್ರಧಾನಿ ಮೋದಿ ವಿಮಾನ ಹಾರಾಟಕ್ಕೆ ಅವಕಾಶ ಮಾಡಿಕೊಡುವುದಾಗಿ ಪಾಕಿಸ್ತಾನ ಹೇಳಿತ್ತು. ಆದರೆ ಭಾರತ ಯಾವುದೇ ಮನವಿ ಸಲ್ಲಿಸಿರಲಿಲ್ಲ. ಇದೇ ರೀತಿ ಭಾರತವು ಪಾಕಿಸ್ತಾನದ ವೈಮಾನಿಕ ಹಾರಾಟದ ಮೇಲೆ ಹೇರಿದ್ದ ನಿರ್ಬಂಧವನ್ನು ಮೇ 31ರಂದು ತೆರವುಗೊಳಿಸಿತ್ತು. ಈ ನಿರ್ಬಂಧದಿಂದ ಭಾರತಕ್ಕೆ ಜುಲೈ 2ರವರೆಗೆ 491 ಕೋಟಿ ರೂ ನಷ್ಟ ಉಂಟಾಗಿತ್ತು. ಸ್ಪೈಸ್ ಜೆಟ್, ಇಂಡಿಗೋ, ಗೋ ಏರ್‌ ಗೆ 30.73 ಕೋಟಿ , 25.1 ಕೋಟಿ, 2.1ಕೋಟಿ ರೂ ನಷ್ಟವಾಗಿತ್ತು ಎಂದು ವರದಿಯಲ್ಲಿ ಹೇಳಲಾಗಿದೆ.

ಮಂಗಳವಾರ ಬೆಳಗ್ಗೆ 12.41ರಿಂದ ತನ್ನ ವಾಯುಪ್ರದೇಶದ ಮೂಲಕ ಎಲ್ಲಾ ರೀತಿಯ ನಾಗರಿಕ ವಿಮಾನಗಳ ಹಾರಾಟ ನಡೆಸಬಹುದು ಎಂದು ಪಾಕಿಸ್ತಾನ ವಿಮಾನಯಾಣ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

ನಾಗರಿಕ ವಿಮಾನಗಳ ಹಾರಾಟಕ್ಕೆ ವಾಯುಪ್ರದೇಶ ನಿರ್ಬಂಧ ತೆರವು ಮಾಡುವಂತೆ ಭಾರತ ಸರ್ಕಾರ ಪಾಕಿಸ್ತಾನವನ್ನು ಕೇಳಿಕೊಂಡಿತ್ತು.

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago