ಬೆಳಗಾವಿ: ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಡಿನ ದಾಳಿಯಲ್ಲಿ ಬೆಳಗಾವಿ ತಾಲೂಕಿನ ಉಚಗಾಂವ ಗ್ರಾಮದ ಯೋಧ ರಾಹುಲ್ ಭೈರು ಸುಳಗೇಕರ (25) ಹುತಾತ್ಮರಾಗಿದ್ದಾರೆ.
ಪಾಕ್ ಪಡೆಗಳು ಗುರುವಾರ ರಾತ್ರಿ ಕದನ ವಿರಾಮ ಉಲ್ಲಂಘಿಸಿ ಜಮ್ಮು-ಕಾಶ್ಮೀರದ ಕೃಷ್ಣಘಾಟಿ ಸೆಕ್ಟರ್ನಲ್ಲಿ ಅಪ್ರಚೋದಿತ ದಾಳಿ ಆರಂಭಿಸಿದ್ದವು. ಪಾಕ್ ಪುಂಡಾಟಕ್ಕೆ ಭಾರತದ ಪಡೆಗಳು ತಕ್ಕ ಪ್ರತ್ಯುತ್ತರ ನೀಡಲಾರಂಭಿಸಿದವು. ಈ ವೇಳೆ ರಾಹುಲ್ ಸುಳಗೇಕರ ಗುಂಡು ತಗುಲಿ ವೀರಮರಣ ಹೊಂದಿದ್ದಾರೆ.
ಸಣ್ಣ ವಯಸ್ಸಿನಲ್ಲೇ ಸೇನೆ ಸೇರಿ ದೇಶ ಸೇವೆಯ ಕನಸು ಕಂಡಿದ್ದ ಸುಳಗೇಕರ, 4 ವರ್ಷಗಳ ಹಿಂದೆಯೇ ಸೇನೆಗೆ ಸೇರ್ಪಡೆಯಾಗಿದ್ದರು. ಗಣೇಶ ಉತ್ಸವ ವೇಳೆ ರಜೆ ಪಡೆದು ತವರಿಗೆ ಬಂದಿದ್ದರು. ಹಬ್ಬ ಮುಗಿಸಿಕೊಂಡು ಕರ್ತವ್ಯಕ್ಕೆ ಮರಳಿದ್ದರು.
ಜಮ್ಮುವಿನ ಪುಂಚ್ ಬಳಿ ಭಯೋತ್ಪಾದಕರೊಂದಿಗೆ ಸೆಣಸಾಡುವಾಗ ಗುಂಡು ತಗುಲಿ ಹುತಾತ್ಮನಾಗಿದ್ದಾರೆ. ರಾಹುಲ್ ಅಣ್ಣ ಮಯೂರ ಕೂಡ ಸೈನ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ರಾಹುಲ್ ಅವರ ತಂದೆ ಸಹ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. ತನ್ನ ಇಬ್ಬರೂ ಮಕ್ಕಳನ್ನೂ ಸೇನೆಗೆ ಸೇರಿಸಿ ತಂದೆ ಭೈರು ಸುಳಗೇಕರ ದೇಶಾಭಿಮಾನ ಮೆರೆದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…