ನವದೆಹಲಿ : ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧರು ಅಂತರರಾಷ್ಟ್ರೀಯ ಗಡಿಯ ಸಮೀಪ ಇಂದು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಪಠಾಣ್‌ಕೋಟ್ ಗಡಿ ಪ್ರದೇಶದ ಬಿಒಪಿ ತಾಶ್‌ಪತನ್‌ನಲ್ಲಿ ಪಾಕ್ ನುಸುಳುಕೋರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಭಾಗದಲ್ಲಿ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಸಿಬ್ಬಂದಿ ನುಸುಳುಕೋರನ ಚಲನವಲನಗಳನ್ನು ಗಮನಿಸಿ ಅನುಮಾನಗೊಂಡಿದ್ದಾರೆ.
ತಕ್ಷಣವೇ ಕಾರ್ಯಪ್ರವೃತ್ತರಾದ ಬಿಎಸ್‌ಎಫ್ ಪಡೆ ನುಸುಳುಕೋರನಿಗೆ ಹಲವು ಬಾರಿ ಎಚ್ಚರಿಕೆ ನೀಡಿದೆ. ಹಲವು ಬಾರಿ ಎಚ್ಚರಿಕೆ ನೀಡಿದ ಬಳಿಕವೂ ಪಾಕ್ ನುಸುಳುಕೋರ ಗಡಿ ದಾಟಲು ಪ್ರಯತ್ನಿಸಿದ್ದಾನೆ. ಈ ವೇಳೆ ಬಿಎಸ್‌ಎಫ್ ಸಿಬ್ಬಂದಿ ಆತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಗಡಿ ಭದ್ರತಾ ಪಡೆಯ ವಕ್ತಾರರು ತಿಳಿಸಿದ್ದಾರೆ.
ಪಾಕ್ ನುಸುಳುಕೋರನ ಒಳನುಸುಳುವಿಕೆಗೆ ಕಾರಣ ಮತ್ತು ಅವನ ಗುರುತು ಪತ್ತೆ ಮಾಡುವ ಬಗ್ಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…