Featured

ಪಾಕಿಸ್ತಾನ ನುಸುಳುಕೋರನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಿಎಸ್‌ಎಫ್ – vishwanews24

ಪಾಕಿಸ್ತಾನ ನುಸುಳುಕೋರನನ್ನು ಗುಂಡಿಕ್ಕಿ ಹತ್ಯೆ ಮಾಡಿದ ಬಿಎಸ್‌ಎಫ್

ನವದೆಹಲಿ : ಪಾಕಿಸ್ತಾನದ ನುಸುಳುಕೋರನೊಬ್ಬನನ್ನು ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಯೋಧರು ಅಂತರರಾಷ್ಟ್ರೀಯ ಗಡಿಯ ಸಮೀಪ ಇಂದು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪಠಾಣ್‌ಕೋಟ್ ಗಡಿ ಪ್ರದೇಶದ ಬಿಒಪಿ ತಾಶ್‌ಪತನ್‌ನಲ್ಲಿ ಪಾಕ್ ನುಸುಳುಕೋರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಈ ಭಾಗದಲ್ಲಿ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಸಿಬ್ಬಂದಿ ನುಸುಳುಕೋರನ ಚಲನವಲನಗಳನ್ನು ಗಮನಿಸಿ ಅನುಮಾನಗೊಂಡಿದ್ದಾರೆ.

ತಕ್ಷಣವೇ ಕಾರ್ಯಪ್ರವೃತ್ತರಾದ ಬಿಎಸ್‌ಎಫ್ ಪಡೆ ನುಸುಳುಕೋರನಿಗೆ ಹಲವು ಬಾರಿ ಎಚ್ಚರಿಕೆ ನೀಡಿದೆ. ಹಲವು ಬಾರಿ ಎಚ್ಚರಿಕೆ ನೀಡಿದ ಬಳಿಕವೂ ಪಾಕ್ ನುಸುಳುಕೋರ ಗಡಿ ದಾಟಲು ಪ್ರಯತ್ನಿಸಿದ್ದಾನೆ. ಈ ವೇಳೆ ಬಿಎಸ್‌ಎಫ್ ಸಿಬ್ಬಂದಿ ಆತನನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಗಡಿ ಭದ್ರತಾ ಪಡೆಯ ವಕ್ತಾರರು ತಿಳಿಸಿದ್ದಾರೆ.

ಪಾಕ್ ನುಸುಳುಕೋರನ ಒಳನುಸುಳುವಿಕೆಗೆ ಕಾರಣ ಮತ್ತು ಅವನ ಗುರುತು ಪತ್ತೆ ಮಾಡುವ ಬಗ್ಗೆ ಅಧಿಕಾರಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ.

Vishwa News 24

Recent Posts

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

8 minutes ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

19 minutes ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

2 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

2 hours ago

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ – vishwanews24

ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…

3 hours ago

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  – vishwanews24

ಉಡುಪಿ: ಸ್ಪೀಡ್‌ ರಾಡಾರ್‌ ಕೆಮರಾ ಕಣ್ಣು ; ಒಂದು ವಾರದಲ್ಲಿ 47,709 ವಾಹನಗಳು ಸಂಚಾರ ನಿಯಮ ಉಲ್ಲಂಘನೆ  ಉಡುಪಿ :…

3 hours ago