ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ : ಸಿಎಂ  ಪ್ರತಿಕ್ರಿಯೆ  – Vishwanews24

Featured, ರಾಜ್ಯ ನ್ಯೂಸ್

ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ : ಸಿಎಂ  ಪ್ರತಿಕ್ರಿಯೆ 

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿರುವ ಆರೋಪಕ್ಕೆ ಸಂಬಂಧಿಸಿ ರಾಜಕೀಯ ಆರೋಪ-ಪ್ರತ್ಯಾರೋಪ ತೀವ್ರಗೊಂಡಿರುವ ಬೆನ್ನಲ್ಲೇ ಆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕೂಗಿರುವುದು ಸಾಬೀತಾದರೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ದೇಶ ದ್ರೋಹಿಗಳನ್ನು ಮಟ್ಟಹಾಕಬೇಕಿದೆ ಎಂದು ಅವರು ಬುಧವಾರ ಹೇಳಿದ್ದಾರೆ.

ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಯೇ ಎಂಬ ಬಗ್ಗೆ ಮೊದಲು ತನಿಖೆಯಾಗಬೇಕಿದೆ. ಅದಕ್ಕೆ ಸಂಬಂಧಿಸಿದ ವಿಡಿಯೋ ತುಣುಕುಗಳನ್ನು ಈಗಾಗಲೇ ವಿಧಿವಿಜ್ಞಾನ ಪ್ರಯೋಗಾಯಕ್ಕೆ ತನಿಖೆಗೆ ಕಳುಹಿಸಿಕೊಟ್ಟಿದ್ದೇವೆ. ಘೋಷಣೆ ಕೂಗಿದ್ದು ನಿಜವೇ ಆಗಿದ್ದರೆ ಕ್ರಮ ಕೈಗೊಳ್ಳುತ್ತೇವೆ. ತಪ್ಪಿತಸ್ಥರು ಯಾರೇ ಆಗಿರಲಿ, ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಈ ಸಲ ಗೆದ್ದರೆ ಇನ್ನಷ್ಟು ನಾಚಿಕೆ ಮಾನ, ಮರ್ಯಾದೆ ಕಳೆದುಕೊಳ್ಳುತ್ತಾನೆ : ಪ್ರಧಾನಿ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಪ್ರಕಾಶ್ ರಾಜ್ – Vishwanews24

Leave a Reply