ಮುಂಬೈ: ಭಯೋತ್ಪಾದನೆಗೆ ಪ್ರೋತ್ಸಾಹ ನೀಡುವುದನ್ನು ನಿಲ್ಲಿಸದಿದ್ದರೆ ಹಣಕಾಸು ಕ್ರಿಯಾ ಕಾರ್ಯಪಡೆ(ಎಫ್ಎಟಿಎಫ್)ಯಿಂದ ಪಾಕಿಸ್ತಾನ ಕಪ್ಪುಪಟ್ಟಿಗೆ ಸೇರುವುದು ಖಂಡಿತ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಕೆ ನೀಡಿದ್ದಾರೆ.
ಭಾರತದ ಮೇಲೆ ಇನ್ನು ಮುಂದೆ ಸುಲಭವಾಗಿ ಗುರಿಯಾಗಿಟ್ಟುಕೊಂಡು ದಾಳಿ ಮಾಡಲು ಸಾಧ್ಯವಿಲ್ಲ. ಕಳೆದ ಐದೂವರೆ ವರ್ಷಗಳ ಆಡಳಿತದಲ್ಲಿ ನಮ್ಮ ಸರ್ಕಾರ ಭಾರತದಲ್ಲಿರುವ ಎಲ್ಲಾ ಉಗ್ರರ ಮೂಲಭೂತ ಸೌಕರ್ಯಗಳನ್ನು ನಾಶಪಡಿಸಿದ್ದು ಇನ್ನು ಮುಂದೆ ಎಫ್ಎಟಿಎಫ್ ನೆರವಿನೊಂದಿಗೆ ಎಲ್ಲಾ ಭಯೋತ್ಪಾದಕ ಹಣಕಾಸು ಸಂಪರ್ಕಜಾಲವನ್ನು ನಾಶಪಡಿಸಲು ಮುಂದಾಗಿದ್ದೇವೆ ಎಂದರು.
ಗಡಿ ಭದ್ರತೆ ವಿಷಯದಲ್ಲಿ ಕಳೆದ 11 ವರ್ಷಗಳಲ್ಲಿ ಭಾರತ ಬಲಿಷ್ಟವಾಗಿದ್ದು ಹೀಗಾಗಿ ಯಾವ ಉಗ್ರಗಾಮಿ ಸಂಘಟನೆಗಳಿಗೂ ಕೂಡ ಮತ್ತೊಂದು 26/11ರ ದಾಳಿಯಂತಹ ದಾಳಿಯನ್ನು ನಡೆಸುವುದು ಕಷ್ಟವಿದೆ. ಕಳೆದ 5 ವರ್ಷಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಬಿಟ್ಟರೆ ಬೇರೆ ಯಾವ ಕಡೆಯೂ ಭಯೋತ್ಪಾದಕ ದಾಳಿ ನಡೆದಿಲ್ಲ ಎಂದು ಸ್ಮರಿಸಿಕೊಂಡರು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…