ಬ್ರುಸೆಲ್: ಪಾಕಿಸ್ತಾನ ಬಹಿರಂಗವಾಗಿ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿದ್ದು, ಭಯೋತ್ಪಾದಕ ಗುಂಪುಗಳನ್ನು ಹುಟ್ಟುಹಾಕುವುದು ಮತ್ತು ಅಂತಹ ಸಂಘಟನೆಗಳಿಗೆ ಹಣಕಾಸಿನ ನೆರವು ನೀಡುವುದನ್ನು ನಿಲ್ಲಿಸುವವರೆಗೆ ಆ ದೇಶದೊಂದಿಗೆ ಸಂಧಾನ ಮಾತುಕತೆಯ ಪ್ರಶ್ನೆಯೇ ಇಲ್ಲ ಎಂದು ವಿದೇಶಾಂಗ ವ್ಯವಹಾರಗಳ ಖಾತೆ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.
ನ್ಯೂಯಾರ್ಕ್ ಟೈಮ್ಸ್ ಪತ್ರಿಕೆಯಲ್ಲಿ ಕಾಶ್ಮೀರದ ಬಗ್ಗೆ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಬರೆದ ಅಭಿಪ್ರಾಯದ ಬಗ್ಗೆ ಜೈಶಂಕರ್ ಪ್ರತಿಕ್ರಿಯಿಸಿದ್ದಾರೆ.ದಕ್ಷಿಣ ಏಷ್ಯಾದ ಮೇಲೆ ಪರಮಾಣುವಿನ ಕರಿನೆರಳು ಬೀಳುತ್ತಿರುವ ಸಂದರ್ಭದಲ್ಲಿ ಕಾಶ್ಮೀರ ವಿವಾದ ಕುರಿತು ಭಾರತದೊಂದಿಗೆ ತುರ್ತು ಮಾತುಕತೆ ನಡೆಸುವ ಅಗತ್ಯವಿದೆ ಎಂದು ಹೇಳಿದರು.
ಇಮ್ರಾನ್ ಖಾನ್ ಅವರು ಬರೆದ ಅಭಿಪ್ರಾಯವನ್ನು ನಾನು ಓದಿಲ್ಲ ಆದರೆ, ಪಾಕಿಸ್ತಾನ ಬಹಿರಂಗವಾಗಿಯೇ ಭಯೋತ್ಪಾದನೆಗೆ ಪ್ರೋತ್ಸಾಹ ನೀಡುತ್ತಿರುವಾಗ ಅದರೊಂದಿಗೆ ಮಾತುಕತೆ ಆರಂಭ ಸಾಧ್ಯವೇ ಇಲ್ಲ, ಪಾಕಿಸ್ತಾನದ ಒಂದು ಮೂಲೆಯ ಕತ್ತಲೆಯಲ್ಲಿ ಕುಳಿತುಕೊಂಡು ಭಯೋತ್ಪಾದನೆ ಆರಂಭಿಸುವುದಲ್ಲ. ಅದು ಎಲ್ಲರಿಗೂ ಗೊತ್ತಾಗುವಂತೆಯೇ ಬಹಿರಂಗವಾಗಿಯೇ ನಡೆಯುತ್ತಿದೆ ಎಂದು ಟೀಕಿಸಿದರು.
ಮುಂದಿನ ದಿನಗಳಲ್ಲಿ ಕಾಶ್ಮೀರ ಪರಿಸ್ಥಿತಿ ನೋಡಿಕೊಂಡು ಹಂತಹಂತವಾಗಿ ನಿರ್ಬಂಧಗಳನ್ನು ಸಡಿಲಗೊಳಿಸಲಾಗುವುದು ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…