ಪಾಕಿಸ್ತಾನ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವಕಪ್ ಪಂದ್ಯದಲ್ಲಿ ನಾವು ಗೆಲ್ಲುವುದು ಖಚಿತ : ವಿರೇಂದ್ರ ಸೆಹ್ವಾಗ್ -Vishwanews24
ದೆಹಲಿ: ನಾಳೆ ಪಾಕಿಸ್ತಾನ ವಿರುದ್ಧ ನಡೆಯಲಿರುವ ಐಸಿಸಿ ವಿಶ್ವಕಪ್ನ 22ನೇ ಪಂದ್ಯದಲ್ಲಿ ನಾವು ಗೆಲ್ಲುವುದು ಖಚಿತ ಎಂದು ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್ಮನ್ ವಿರೇಂದ್ರ ಸೆಹ್ವಾಗ್ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ನಾಳೆ ನಡೆಯಲಿರುವ ಪಂದ್ಯದಲ್ಲಿ ಯಾವುದೇ ಕಾರಣಕ್ಕೂ ಪಾಕಿಸ್ತಾನ, ಭಾರತವನ್ನು ಮಣಿಸಲು ಸಾಧ್ಯವಿಲ್ಲ. ಗೆಲುವು ನಮ್ಮದೇ ಎಂದು ಭವಿಷ್ಯ ನುಡಿದಿದ್ದಾರೆ.
ಪಾಕಿಸ್ತಾನ ತಂಡವನ್ನು ಭಾರತ ಮಣಿಸುತ್ತದೆ ಎಂಬ ವಿಶ್ವಾಸ ನನಗಿದೆ. ಗೆಲುವು ನಮ್ಮ ಕೈಯಲ್ಲಿರುತ್ತದೆ ಎಂದು ಸೆಹ್ವಾಗ್ ಹೇಳಿದರೆ, ಅದಕ್ಕೆ ಪ್ರತಿಕ್ರಿಯಿಸಿದ ಅಖ್ತರ್ ಒಂದು ವೇಳೆ ಪಾಕ್ ಟಾಸ್ ಗೆದ್ದರೆ ಗೆಲುವು ಸಾಧಿಸಲಿದೆ ಎಂದು ತಿಳಿಸಿದ್ದಾರೆ.
ಐಸಿಸಿ ಚಾಂಪಿಯನ್ ಟ್ರೋಫಿಯಲ್ಲಿ ಟೀಂ ಇಂಡಿಯಾ ಪಾಕಿಸ್ತಾನ ಎದುರು ಸೋಲನುಭವಿಸಿತ್ತು. ಅದಕ್ಕೆ ತಿರುಗೇಟು ನೀಡಲು ಕೊಹ್ಲಿ ಪಡೆಗೆ ಈ ಪಂದ್ಯ ಒಂದು ಉತ್ತಮ ವೇದಿಕೆ ಕಲ್ಪಿಸಲಿದೆ. ಈ ಹಿಂದಿನ ವಿಶ್ವಕಪ್ ಆವೃತ್ತಿಗಳಲ್ಲಿ ಭಾರತ, ಪಾಕ್ ಎದುರು ಸೋಲನುಭವಿಸಿಲ್ಲ. ನಾಳೆಯ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸಬಾರದು ಎಂದು ಉಭಯ ತಂಡಗಳ ಕ್ರಿಕೆಟ್ ಅಭಿಮಾನಿಗಳ ಆಸೆಯಾಗಿದೆ
