ಇಸ್ಲಾಮಬಾದ್: ಇದೇ ಮೊದಲ ಬಾರಿಗೆ ಪಾಕಿಸ್ತಾನದ ಸಹಾಯಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಹಿಂದೂ ಧರ್ಮದ ಯುವತಿ ಆಯ್ಕೆಯಾಗಿದ್ದಾರೆ.
ಪಾಕಿಸ್ತಾನ ಸರ್ಕಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಸಿಂಧ್ ಪ್ರಾಂತ್ಯದ ಯುವತಿ ಪುಷ್ಪಾ ಕೊಲ್ಹಿ ಆಯ್ಕೆಯಾಗಿದ್ದಾರೆ. ಈ ಮೂಲಕ ಪಾಕ್‌ನ ಮೊದಲ ಹಿಂದೂ ಪೊಲೀಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.
ಪಾಕಿಸ್ತಾನದ ಸಿಂಧ್ ಪಬ್ಲಿಕ್ ಸರ್ವೀಸ್ ಕಮಿಷನ್ ಇತ್ತೀಚೆಗೆ ನಡೆಸಿದ ಪ್ರಾಂತೀಯ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಪುಷ್ಪಾ ಹೆಚ್ಚು ಅಂಕಗಳನ್ನು ಪಡೆದು ಆಯ್ಕೆಯಾಗಿದ್ದಾರೆ.
ಕಳೆದ ಜನವರಿಯಲ್ಲಿ ಪಾಕಿಸ್ತಾನದ ನ್ಯಾಯಾಧೀಶರಾಗಿ ಸಿಂಧ್ ಪ್ರಾಂತ್ಯದ ಹಿಂದೂ ಮಹಿಳೆಯೊಬ್ಬರು ಆಯ್ಕೆಯಾಗಿದ್ದಾರೆ. ಪಾಕಿಸ್ತಾನ ಸರ್ಕಾರ ನಡೆಸಿದ ನ್ಯಾಯಾಧೀಶರ ಪರೀಕ್ಷೆಯಲ್ಲಿ ಸುಮನ್ ಪವನ್ ಬೋದನಿ ಎಂಬುವರು 54ನೇ ಸ್ಥಾನ ಪಡೆದು ನ್ಯಾಯಾಧೀಶರ ಪಟ್ಟ ಅಲಂಕರಿಸಿದ್ದಾರೆ. ಈ ಸಂಬಂಧ ಅಂತರರಾಷ್ಟ್ರೀಯ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿದ ಸುಮನ್, ಸಿಂಧ್ ಪ್ರಾಂತ್ಯ ತೀರಾ ಹಿಂದುಳಿದ ಪ್ರದೇಶವಾಗಿದ್ದು, ಈ ಪ್ರದೇಶದಿಂದ ನಾನು ಆಯ್ಕೆಯಾಗಿರುವುದಕ್ಕೆ ಹೆಮ್ಮೆಪಡುತ್ತೇನೆ. ನನ್ನ ಈ ಸಾಧನೆಗೆ ನನ್ನ ಕುಟುಂಬದವರ ಸಹಕಾರ ಕಾರಣ ಎಂದು ಹೇಳಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್‌ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…