Featured

ಪಾಕ್ ನಲ್ಲಿ ಅಪಾರ ಹಿಂಸೆ ಅನುಭವಿಸಿದರೂ ದೇಶದ ರಹಸ್ಯವನ್ನು ಶತ್ರು ರಾಷ್ಟ್ರಕ್ಕೆ ಬಿಟ್ಟು ಕೊಡದ ವೀರ ಯೋಧ ಅಭಿನಂದನ್‌ -Vishwanews24

ನವದೆಹಲಿ:ಅಭಿನಂದನ್ ಅವರು ಪಾಕಿಸ್ತಾನದ ವಶದಲ್ಲಿದ್ದ ಮೊದಲ 24 ಗಂಟೆಗಳ ಕಾಲ ಬಹಳಷ್ಟು ಹಿಂಸೆ ಅನುಭವಿಸಿದ್ದು, ಅವರನ್ನು ಮಾನಸಿಕವಾಗಿ ಕುಗ್ಗಿಸಿದ್ದರು. ಹಾಗೂ ವಾಯುಪಡೆಯ ಅತ್ಯಮೂಲ್ಯ ಮಾಹಿತಿಯನ್ನು ಪಡೆಯುವ ವಿಫಲ ಯತ್ನ ನಡೆಸಿತ್ತು ಎಂದು ವರದಿಯಲ್ಲಿ ಹೇಳಲಾಗುತ್ತಿದೆ.

ಭಾರತೀಯ ವಾಯು ಪಡೆಯು ದಾಳಿ ವೇಳೆ ಬಳಸುತ್ತಿದ್ದ ಅತ್ಯಧಿಕ ಭದ್ರತೆಯ ರೇಡಿಯೋ ತರಂಗಾಂತರಗಳ ಮಾಹಿತಿ, ಭಾರತೀಯ ಸೇನೆಯ ನಿಯೋಜನೆ ಮತ್ತು ಅವುಗಳ ನಿಖರ ತಾಣ, ಅತಿ ಸೂಕ್ಷ್ಮ ಸೇನಾ ಸಾರಿಗೆ ಮಾಹಿತಿ, ದಾಳಿಗೆ ಭಾರತ ಸಿದ್ಧಪಡಿಸಿರುವ ಫೈಟರ್‌ ಜೆಟ್‌ಗಳ ನಿಖರ ಸಂಖ್ಯೆ ಇತ್ಯಾದಿಗಳ ರಹಸ್ಯ ಮಾಹಿತಿಯನ್ನು ಅಭಿನಂದನ್‌ ಅವರಿಂದ ಪಡೆಯಲು ಪಾಕ್‌ ಸೇನೆ ಇನ್ನಿಲ್ಲದ ರೀತಿಯ ಮಾನಸಿಕ ಹಿಂಸೆಯನ್ನು ನೀಡಿತ್ತು.

ಅಭಿನಂದನ್‌ ಅವರಿಂದ ಐಎಎಫ್ ರೇಡಿಯೋ ತರಂಗಾಂತರ ಮಾತ್ರವಲ್ಲದೆ ಇನ್ನಿತರ ಹಲವು ರಹಸ್ಯ ಮಾಹಿತಿಗಳನ್ನು ಪಡೆಯಲು ಪಾಕ್‌ ಸೇನೆ ಆತನಿಗೆ ದಿನಪೂರ್ತಿ ನಿಂತಿರುವ ಶಿಕ್ಷೆ ನೀಡಿತು. ಮಾತ್ರವಲ್ಲದೆ ಕಿವಿ ತಮಟೆ ಕಿತ್ತುಹೋಗುವಷ್ಟು ದೊಡ್ಡ ಸದ್ದಿನ ಸಂಗೀತವನ್ನು ಆತ ಬಲವಂತದಿಂದ ಕೇಳುವಂತೆ ಮಾಡಿತು. ಜತೆಗೆ ದೈಹಿಕವಾಗಿ ಆತನ ಮೇಲೆ ಹಲ್ಲೆ ನಡೆಸಲಾಯಿತು.

ವರ್ಧಮಾನ್‌ ಅವರು ಪಾಕ್‌ ನಿಂದ ಬಿಡುಗಡೆಯಾಗಿ ಭಾರತಕ್ಕೆ ಬಂದ ಬಳಿಕ ಮಿಲಿಟರಿ ಆಸ್ಪತ್ರೆಯಲ್ಲಿನ “ಕೂಲಿಂಗ್‌ ಡೌನ್‌’ ಪ್ರಕ್ರಿಯೆಯಲ್ಲಿ ತನ್ನ ಹಿರಿಯ ಅಧಿಕಾರಿಗಳಿಗೆ ತಾನು ಪಾಕ್‌ ಸೇನೆಯ ವಶದಲ್ಲಿದ್ದಾಗ ಅನುಭವಿಸಿದ್ದ ನರಕ ಯಾತನೆಯ ವಿವರಗಳನ್ನು ತಿಳಿಸಿದರು.

ನಮ್ಮ ದೇಶದ ಆ ನಾಯಕ ಪಾಕ್ ನೀಡಿದ ಎಲ್ಲಾ ಹಿಂಸೆಯನ್ನು ಸಹಿಸಿಕೊಂಡು ಶತ್ರು ಸೇನೆಗೆ ಯಾವುದೇ ಮಾಹಿತಿಯನ್ನು ಬಿಟ್ಟುಕೊಡದಿರುವಲ್ಲಿ ಯಶಸ್ವಿಯಾದರು ಎಂದು ಹಿಂದುಸ್ಥಾನ್‌ ಟೈಮ್ಸ್‌ ತನ್ನ ವರದಿಯಲ್ಲಿ ಹೇಳಿದೆ.

ಶತ್ರು ರಾಷ್ಟ್ರದಲ್ಲಿ ಹಿಂಸೆ ನೀಡಿದ್ರೂ ಅಭಿನಂದನ್ ಯಾವುದೇ ರಹಸ್ಯವನ್ನು ಬಿಟ್ಟುಕೊಟ್ಟಿಲ್ಲ. ಪಾಕ್ ಸೇನೆ ವಶಕ್ಕೆ ಪಡೆಯುವ ಸಂದರ್ಭದಲ್ಲಿ ಪಾಕಿಸ್ತಾನ ಸೇನೆ ಹಿಂಸೆ ನೀಡಿದರೂ, ಅವರು ಯಾವುದೇ ಮಾಹಿತಿ ನೀಡದೆ ದೇಶ ಪ್ರೇಮ ಮೆರೆದಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago