ಪಾಕ್ ಪರ ಘೋಷಣೆ : ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ದೂರು ದಾಖಲು -Vishwanews24

Featured, ರಾಜ್ಯ ನ್ಯೂಸ್

ಹುಬ್ಬಳ್ಳಿ: ಹುಬ್ಬಳ್ಳಿಯ ಕೆಎಲ್‍ಇ ಕಾಲೇಜಿನಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಗೆ ಹಾಜರುಪಡಿಸುವಾಗ ಮೂವರು ವಿದ್ಯಾರ್ಥಿಗಳ ಮೇಲೆ ನ್ಯಾಯಾಲಯದ ಆವರಣದಲ್ಲಿ ಹಲ್ಲೆ ಮಾಡಿದವರ ವಿರುದ್ಧ ಸ್ವಯಂಪ್ರೇರಿತವಾಗಿ ದೂರು ದಾಖಲಾಗಿದೆ.

ಹುಬ್ಬಳ್ಳಿಯ ಕೋರ್ಟ್ ಆವರಣದಲ್ಲಿ ಆರೋಪಿಗಳ ಮೇಲೆ ಚಪ್ಪಲಿ ಎಸೆತ ಹಾಗೂ ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ವಿದ್ಯಾನಗರ ಪೊಲೀಸರು ಸ್ವಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳನ್ನು ಬಿಗಿ ಬಂದೋಬಸ್ತ ಮಧ್ಯೆ ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆ ಹಲ್ಲೆ ನಡೆದಿತ್ತು. ಪೊಲೀಸ್ ವಾಹನ ತಡೆದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹಲ್ಲೆ ನಡೆಸಿದ್ದರು.

ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಸುಮಾರು 10-15 ಜನ ಅಪರಿಚಿತರ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.