ಪಾಕ್ ಪರ ಘೋಷಣೆ : ವೇದಿಕೆ ಮೇಲಿದ್ದ ಎಲ್ಲರ ಮೇಲೂ ದೇಶದ್ರೋಹ ಪ್ರಕರಣ ದಾಖಲಿಸಿ : ಅನಂತಕುಮಾರ್ ಹೆಗಡೆ -Vishwanews24

ಕಾರವಾರ: ಸಿಎಎ ವಿರೋಧಿ ಕಾರ್ಯಕ್ರಮದಲ್ಲಿ ಪಾಕ್ ಪರ ಘೋಷಣೆ ಕೂಗಿದ ಯುವತಿ ಅಮೂಲ್ಯ ಮಾತ್ರವಲ್ಲದೇ ವೇದಿಕೆ ಮೇಲಿದ್ದ ಎಲ್ಲರ ಮೇಲೂ ದೇಶದ್ರೋಹ ಪ್ರಕರಣ ದಾಖಲಿಸುವಂತೆ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ವಿಡಿಯೋ ಪ್ರತಿಕ್ರಿಯೆ ನೀಡಿರುವ ಅನಂತ್ ಕುಮಾರ್ ಹೆಗ್ಡೆ ಅವರು, ‘ಬೆಂಗಳೂರಿನ ಫ್ರೀಡಂ ಪಾರ್ಕ್ ಬಳಿ ಸಿಎಎ ಹೋರಾಟ ಸಭೆಯಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದ ಚಿಕ್ಕಮಗಳೂರು ಮೂಲದ ಅಮೂಲ್ಯ ಲಿಯೋನ ಜೊತೆಗೆ ವೇದಿಕೆ ಮೇಲಿರುವ ಎಲ್ಲರ ವಿರುದ್ಧ ದೇಶ ದ್ರೋಹದ ವಿರುದ್ಧ ಕೇಸು ದಾಖಲಿಸುವಂತೆ ಆಗ್ರಹಿಸಿದ್ದಾರೆ.

‘ಎಡಪಂತೀಯ ವಿಚಾರ, ದೇಶದ್ರೋಹಿ ವಿಚಾರವಾಗಿ ಮಾರ್ಪಟ್ಟಿದೆ. ಸಿಎಎ ಹೋರಾಟ ದೇಶದ್ರೋಹಿ ಹೋರಾಟವಾಗಿ, ದೇಶದ್ರೋಹಿ ಚಟುವಟಿಕೆಯಾಗಿ ದೇಶ ವಿರೋಧಿ ಮತ್ತು ಹಿಂದೂ ವಿರೋಧಿ ಹೋರಾಟವಾಗಿ ಮಾರ್ಪಟ್ಟಿದೆ. ಹೀಗಾಗಿ ವೇದಿಕೆ ಮೇಲಿದ್ದ ಎಲ್ಲರ ಮೇಲೆ ದೇಶದ್ರೋಹದ ಕೇಸು ದಾಖಲಿಸಬೇಕು. ದೇಶದ್ರೋಹಿಗಳನ್ನು ತಕ್ಷಣ ಬಂಧಿಸಬೇಕು. ಸಿಎಎ ಪ್ರತಿಭಟನೆ ದೇಶದ್ರೋಹಿಗಳ ಆಡಂಬರ ಆಗಬಾರದು. ಎಲ್ಲರನ್ನೂ ದೇಶದ್ರೋಹದ ಪ್ರಕರಣದಲ್ಲಿ ಬಂಧಿಸಬೇಕು ಎಂದು ಅನಂತ್ ಕುಮಾರ್ ಹೆಗ್ಡೆ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

7 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

9 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

9 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

10 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

10 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

10 hours ago