ಚಿತ್ರದುರ್ಗ : “ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಇತ್ತೀಚೆಗೆ ಪಾಕ್ ಮೇಲೆ ಬಹಳ ಪ್ರೀತಿ ಮೂಡುತ್ತಿದೆ. ಪಾಕ್ ಮೇಲೆ ಪ್ರೀತಿ ಇರುವ ಅವರು ಭಾರತ ದೇಶದಿಂದ ತೊಲಗಲಿ” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ಶುಕ್ರವಾರ ಚಿತ್ರದುರ್ಗದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಮಾಜಿ ಪ್ರಧಾನಿ ಪುತ್ರ ಕುಮಾರ ಸ್ವಾಮಿಯವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಹಾಗಿದ್ದು ಈ ರೀತಿ ಮಾತನಾಡುವುದು ಸರಿಯಲ್ಲ” ಎಂದು ಹೇಳಿದ್ದಾರೆ.
“ಭಾರತ ಹಿಂದೂ ರಾಷ್ಟ್ರವಾಗಿದ್ದು ಇಲ್ಲಿ ಎಲ್ಲರೂ ಸಮಾನರಾಗಿ ಬಾಳಬೇಕು. ದೇಶ ಒಡೆಯುವ ಉದ್ದೇಶದಿಂದ ಈ ರೀತಿ ಮಾತನಾಡುವುದು ಸರಿಯಲ್ಲ. ದೇಶದ ಜನತೆ ಒಂದಾಗುತ್ತಿದ್ದಾರೆ. ಅವರುನ ವೋಟ್ ಬ್ಯಾಂಕ್ ಹೋಗುತ್ತಿದೆ ಎಂಬ ಕಾರಣದಿಂದಾಗಿ ಈ ರೀತಿ ಮಾತನಾಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ಟೇಕ್ ಆಫ್ ಆಗಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, “ಸಿದ್ಧರಾಮಯ್ಯ ಅವರು ಇಂಗ್ಲೀಷ್ ಪದ ಬಳಸಿ ಟೀಕೆ ಮಾಡುತ್ತಾರೆ. ಇತ್ತೀಚಿಗೆ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಕಾಣಿಸ್ತಿಲ್ಲ, ಅವರು ಯಾರಿಗೂ ಬೇಡದ ವ್ಯಕ್ತಿಯಾಗಿ ಬಿಟ್ಟಿದ್ದಾರೆ. ವಿಪಕ್ಷ ಸ್ಥಾನ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಲಾಭಿ ನಡೆಯುತ್ತಿದೆ. ಕಾಂಗ್ರೆಸ್ ಪಕ್ಷ ಡೆತ್ ಆಗಿರುವ ಪಾರ್ಟಿಯಾಗಿದೆ. ಲೀಡರ್‌ಗಳು ಕೂಡಾ ಡೆತ್ ಆದವರಂತೆ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ” ಎಂದು ಹೇಳಿದರು.
ಹಾಗೆಯೇ “ಚೀನಾದಲ್ಲಿ ಪತ್ತೆಯಾಗಿರುವ ಕೊರೋನಾ ವೈರಸ್ ಭಾರತಕ್ಕೆ ಪ್ರವೇಶ ಮಾಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಏರ್‌ಪೋರ್ಟ್‌ನಲ್ಲಿ ತಂಡ ನಿಯೋಜನೆ ಮಾಡಲಾಗಿದೆ. ಚೀನಾದಲ್ಲಿ ಇರುವವರ ಕುಟುಂಬಗಳ ಬಗ್ಗೆಯೂ ನಿಗಾ ವಹಿಸಲಾಗಿದೆ” ಎಂದು ಹೇಳಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…