ನವದೆಹಲಿ: ಆಕಸ್ಮಿಕವಾಗಿ ಗಡಿರೇಖೆ ದಾಟಿ ಪಾಕಿಸ್ತಾನ ಸೇನೆಯಿಂದ ಬಂಧನಕ್ಕೆ ಒಳಗಾಗಿದ್ದ ಗಡಿ ಭದ್ರತಾ ಪಡೆ(ಬಿಎಸ್‌ಎಫ್) ಯೋಧ ಪೂರ್ಣಮ್ ಕುಮಾರ್ ಶಾ ಅವರು ವಾಘಾ ಗಡಿ ಮೂಲಕ ಭಾರತಕ್ಕೆ ಮರಳಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದ ಭೂಪ್ರದೇಶವನ್ನು ಬಿಎಸ್‌ಎಫ್ ಕಾನ್‌ಸ್ಟೆಬಲ್ ಆಕಸ್ಮಿಕವಾಗಿ ದಾಟಿದ್ದರು. ಇದೀಗ ಏಪ್ರಿಲ್ 24 ರಿಂದ ಬಂಧನಕ್ಕೊಳಗಾದ ಕಾನ್‌ಸ್ಟೆಬಲ್ ಪೂರ್ಣಮ್ ಕುಮಾರ್ ಶಾ ಅವರನ್ನು ಅಮೃತಸರದ ಅಟ್ಟಾರಿ ಗಡಿ ಜಂಟಿ ಚೆಕ್ ಪೋಸ್ಟ್ ನಲ್ಲಿ ಬುಧವಾರ ಬೆಳಗ್ಗೆ 10:30ಕ್ಕೆ ಹಸ್ತಾಂತರ ಮಾಡಲಾಗಿದೆ.
ಪೂರ್ಣಮ್ ಕುಮಾರ್ ಶಾ ಅವರು ಸೇನಾ ಸಮವಸ್ತ್ರ ಧರಿಸಿದ್ದರು ಹಾಗೂ ಸೇವಾ ಬಂದೂಕು ಹೊಂದಿದ್ದರು. ರೈತರೊಂದಿಗೆ ಇದ್ದ ಅವರು, ವಿಶ್ರಾಂತಿಗಾಗಿ ನೆರಳು ಅರಸಿ ಹೊರಟಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಅವರನ್ನು ಪಾಕ್ ಸೇನೆ ಬಂಧಿಸಿತ್ತು.
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…