Featured

ಪಾದೂರು ISPRL ಎರಡನೇ ಹಂತದ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಗೊಂದಲದ ಬಗ್ಗೆ ಸಭೆ ನಡೆಸುವ ಕುರಿತಾಗಿ ಕಾಪು ಶಾಸಕ ಲಾಲಾಜಿ ನೇತೃತ್ವದಲ್ಲಿ ಜಿಲ್ಲಾಧಿಕಾರಿಯನ್ನು ಭೇಟಿ -ಆಗ್ರಹದ ಮನವಿ ಸಲ್ಲಿಕೆ-_vishwanews24

ಉಡುಪಿ :  ಕಾಪು ತಾಲೂಕು ಪಾದೂರು ಗ್ರಾಮದಲ್ಲಿ ISPRL ಎರಡನೇ ಹಂತದ ಯೋಜನೆಯ ಭೂಸ್ವಾಧೀನ ಪ್ರಕ್ರಿಯೆ ಗೊಂದಲದ ಬಗ್ಗೆ ಸಭೆ ನಡೆಸುವ ಕುರಿತಾಗಿ ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ನೇತೃತ್ವದಲ್ಲಿ ಸೋಮವಾರ ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿ  ಆಗ್ರಹದ ಮನವಿ ಸಲ್ಲಿಸಿದರು
ಉಡುಪಿ ಜಿಲ್ಲೆ ಕಾಪು ತಾಲೂಕು ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮದಲ್ಲಿ ಪೆಟ್ರೋಲಿಯಮ್ ಸಚಿವಾಲಯದ ಅಧೀನದಲ್ಲಿರುವ ಐ.ಎಸ್.ಪಿ.ಅರ್.ಎಲ್. ಇದರ “ಕಚ್ಚಾತೈಲ ಸಂಗ್ರಹಣಾಗಾರ ಘಟಕದ ಅನುಷ್ಠಾನಗೊಂಡಿದ್ದು
ಪ್ರಸ್ತುತ ಪಾದೂರಿನಲ್ಲಿ ‘ಕಚ್ಚಾ ತೈಲ ಸಂಗ್ರಹಣಾಗಾರದ 2ನೇ ಘಟಕವನ್ನು ಸ್ಥಾಪಿಸಲು 1SPRL ಉದ್ದೇಶಿಸಿದ್ದು ಈ ಘಟಕಕ್ಕೆ ಸುಮಾರು 210 ಎಕರೆಗಳಷ್ಟು ಭೂಸ್ವಾಧೀನವನ್ನು ಮಾಡುವರೇ ಎ.ಎಸ್.ಪಿ.ಆರ್. ಕಂಪೆನಿಯವರು. ಈಗಾಗಲೇ ಪ್ರಕ್ರಿಯೆ ಪ್ರಾರಂಭಿಸಿದ್ದು‌
ಈ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಸುಮಾರು 30ಕ್ಕೂ ಹೆಚ್ಚು ಕುಟುಂಬಗಳು ನಿರ್ವಸಿತರಾಗುವ ಸಂಭವವಿರುತ್ತದೆ.ಈ ಬಗ್ಗೆ ಸಾರ್ವಜನಿಕರಿಗೆ ಮತ್ತು ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ಸರಿಯಾದ ಮಾಹಿತಿ ಒದಗಿಸಿರುವುದಿಲ್ಲ.ಭೂಮಿಯ ಮೌಲ್ಯದ ಹೆಚ್ಚಳ ಭೂಮಿ ಕಳೆದುಕೊಳ್ಳುವ ಸಂತ್ರಸ್ತರಿಗೆ ನೀಡುವ ಪರಿಹಾರಧನ, ಪುನರ್ವಸತಿ, ಸಿರಾಸ್ತಿಗಳಿಗೆ ನೀಡುವ ಪರಿಹಾರ ಧನದ ಮಾರ್ಗಸೂಚಿಗಳು ಮತ್ತು ಇನ್ನಿತರ ಸಮಸ್ಯೆಗಳು ಮತ್ತು ಗೊಂದಲಗಳ ಬಗ್ಗೆ ಜಿಲ್ಲಾಧಿಕಾರಿಯ ಅಧ್ಯಕ್ಷತೆಯಲ್ಲಿ ಅತ್ಯಂತ ಶೀಘ್ರವಾಗಿ , ISPRL ಅಧಿಕಾರಿಗಳು, ಕೆ.ಐ.ಎ.ಡಿ.ಬಿ.(SLO) ಅಧಿಕಾರಿಗಳು ಮತ್ತು ಪರಿಹಾರಧನದ ಮೌಲ್ಯ ಮಾಪನ ಮಾಡುವ ತೋಟಗಾರಿಕೆ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಭೂಮಿ ಕಳೆದುಕೊಳ್ಳುವ ಸಂತ್ರಸ್ತರು ಮತ್ತು ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಸಭೆ ಡೆಸಿ ಜನರ ಗೊಂದಲವನ್ನು ನಿವಾರಿಸಿ ಸೂಕ್ತ ನ್ಯಾಯ ಒದಗಿಸಬೇಕೆಂದು ಆಗ್ರಹ ಪತ್ರ ಸಲ್ಲಿಸಿದ್ದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ ಸುವರ್ಣ, ಕಾಪು ತಾಲೂಕು ಪಂಚಾಯತ್ ಅಧ್ಯಕ್ಷೆ ಶಶಿಪ್ರಭಾ ಶೆಟ್ಟಿ, ಪಾದೂರು-ಕಳತ್ತೂರು ಜನಜಾಗೃತಿ  ಸಮಿತಿ ಅಧ್ಯಕ್ಷ ಅರುಣ್ ಶೆಟ್ಟಿ ಪಾದೂರು,ಮಜೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಸಂದೀಪ್ ರಾವ್,ಪ್ರಸಾದ್ ಶೆಟ್ಟಿ ವಳದೂರು ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಮೂಳೂರು
Vishwanews24∴

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

9 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago