ಆಧಾರ್ ಕಾರ್ಡ್ ಅನ್ನು ಪ್ಯಾನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು, ಇನ್ನು ಕೇವಲ 15 ದಿನಗಳು ಮಾತ್ರವೇ ಬಾಕಿ ಇದೆ. ಪ್ಯಾನ್ – ಆದಾರ್ ಲಿಂಕ್ ಮಾಡಲು 2023ರ ಜೂನ್ 30 ಕೊನೆಯ ದಿನವಾಗಿದೆ.
ಜೂ.30 ರ ಒಳಗೆ 1,000 ರೂಪಾಯಿ ದಂಡ ಪಾವತಿ ಮೂಲಕ ಪ್ಯಾನ್‌ನೊಂದಿಗೆ ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನಾಂಕವಾಗಿದೆ.
ಈ ದಿನಾಂಕದೊಳಗೆ ಲಿಂಕ್ ಮಾಡದಿದ್ದರೆ, ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ.
ಆದಾಯ ತೆರಿಗೆ ಇಲಾಖೆ ಈ ಕುರಿತು ಟ್ವೀಟ್ ಮಾಡಿದ್ದು, ಯಾವುದೇ ಕೆಲಸವಿದ್ದರೂ ಜೂನ್ 30 ರ ಮೊದಲು ಆಧಾರ್ ಅನ್ನು ಪ್ಯಾನ್‌ನೊಂದಿಗೆ ಲಿಂಕ್ ಮಾಡುವಂತೆ ಜನರಿಗೆ ಸಲಹೆ ನೀಡಿದೆ.
ಆದಾಯ ತೆರಿಗೆ ಕಾಯ್ದೆ 1961 ರ ಅಡಿಯಲ್ಲಿ, ವಿನಾಯಿತಿ ಪಡೆದ ವರ್ಗದಲ್ಲಿ ಬರದ ಎಲ್ಲ ಪ್ಯಾನ್ ಹೊಂದಿರುವವರು ಜೂನ್ 30 ರೊಳಗೆ ಆಧಾರ್‌ನೊಂದಿಗೆ ಪ್ಯಾನ್ ಲಿಂಕ್ ಮಾಡಬೇಕಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಕೊನೆಯ ದಿನಾಂಕದವರೆಗೆ ಕಾಯದೇ ಇಂದೇ ಆಧಾರ್ – ಪ್ಯಾನ್ ಲಿಂಕ್ ಮಾಡಿ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.
ಲಿಂಕ್ ಮಾಡದಿದ್ದಲ್ಲಿ ಪ್ಯಾನ್ ನಿಷ್ಕ್ರಿಯ:
ಜೂನ್ 30 ರೊಳಗೆ ಆಧಾರ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನಂತರ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ. ಇದರಿಂದ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಒಂದು ವೇಳೆ ನೀವು ತೆರಿಗೆದಾರರಾಗಿದ್ದು, ನಿಮ್ಮ ಪ್ಯಾನ್ ಕಾರ್ಡ್ ನಿಷ್ಕ್ರಿಯವಾದರೆ, ನಿಮಗೆ ತೆರಿಗೆ ಮರುಪಾವತಿ ನೀಡಲಾಗುವುದಿಲ್ಲ. PAN ನಿಷ್ಕ್ರಿಯವಾಗಿರುವ ಅವಧಿಗೆ ಮರುಪಾವತಿಗೆ ಯಾವುದೇ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ. ಅಂತಹ ತೆರಿಗೆದಾರರಿಂದ ಹೆಚ್ಚಿನ TDS ಮತ್ತು TCS ಅನ್ನು ವಿಧಿಸಲಾಗುತ್ತದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…