Featured

ಪಾನ್- ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನ :  ಲಿಂಕ್ ಮಾಡದಿದ್ದಲ್ಲಿ ನಿಮ್ಮ ಪಾನ್ ನಿಷ್ಕ್ರಿಯ.. Vishwanews24

ಪಾನ್- ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನ :  ಲಿಂಕ್ ಮಾಡದಿದ್ದಲ್ಲಿ ನಿಮ್ಮ ಪಾನ್ ನಿಷ್ಕ್ರಿಯ..

ಆಧಾರ್ ಕಾರ್ಡ್  ಅನ್ನು ಪ್ಯಾನ್ ಕಾರ್ಡ್‌ ನೊಂದಿಗೆ ಲಿಂಕ್ ಮಾಡಲು, ಇನ್ನು ಕೇವಲ 15 ದಿನಗಳು ಮಾತ್ರವೇ ಬಾಕಿ ಇದೆ. ಪ್ಯಾನ್‌ – ಆದಾರ್‌ ಲಿಂಕ್ ಮಾಡಲು 2023ರ ಜೂನ್‌ 30 ಕೊನೆಯ ದಿನವಾಗಿದೆ.

ಜೂ.30 ರ ಒಳಗೆ 1,000 ರೂಪಾಯಿ ದಂಡ ಪಾವತಿ ಮೂಲಕ ಪ್ಯಾನ್‌ನೊಂದಿಗೆ ಆಧಾರ್ ಲಿಂಕ್ ಮಾಡಲು ಜೂನ್ 30 ಕೊನೆಯ ದಿನಾಂಕವಾಗಿದೆ.

ಈ ದಿನಾಂಕದೊಳಗೆ ಲಿಂಕ್‌ ಮಾಡದಿದ್ದರೆ, ನಿಮ್ಮ ಪ್ಯಾನ್‌ ಕಾರ್ಡ್‌ ನಿಷ್ಕ್ರಿಯವಾಗುತ್ತದೆ.

ಆದಾಯ ತೆರಿಗೆ ಇಲಾಖೆ ಈ ಕುರಿತು ಟ್ವೀಟ್‌ ಮಾಡಿದ್ದು, ಯಾವುದೇ ಕೆಲಸವಿದ್ದರೂ ಜೂನ್ 30 ರ ಮೊದಲು ಆಧಾರ್ ಅನ್ನು ಪ್ಯಾನ್‌ನೊಂದಿಗೆ ಲಿಂಕ್ ಮಾಡುವಂತೆ ಜನರಿಗೆ ಸಲಹೆ ನೀಡಿದೆ.

ಆದಾಯ ತೆರಿಗೆ ಕಾಯ್ದೆ 1961 ರ ಅಡಿಯಲ್ಲಿ, ವಿನಾಯಿತಿ ಪಡೆದ ವರ್ಗದಲ್ಲಿ ಬರದ ಎಲ್ಲ ಪ್ಯಾನ್ ಹೊಂದಿರುವವರು ಜೂನ್ 30 ರೊಳಗೆ ಆಧಾರ್‌ನೊಂದಿಗೆ ಪ್ಯಾನ್‌ ಲಿಂಕ್ ಮಾಡಬೇಕಾಗುತ್ತದೆ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ. ಕೊನೆಯ ದಿನಾಂಕದವರೆಗೆ ಕಾಯದೇ ಇಂದೇ ಆಧಾರ್ – ಪ್ಯಾನ್ ಲಿಂಕ್ ಮಾಡಿ ಎಂದು ಆದಾಯ ತೆರಿಗೆ ಇಲಾಖೆ ಹೇಳಿದೆ.

ಲಿಂಕ್ ಮಾಡದಿದ್ದಲ್ಲಿ ಪ್ಯಾನ್‌ ನಿಷ್ಕ್ರಿಯ:

ಜೂನ್‌ 30 ರೊಳಗೆ ಆಧಾರ್ ಅನ್ನು ಪ್ಯಾನ್ ಕಾರ್ಡ್‌ನೊಂದಿಗೆ ಲಿಂಕ್ ಮಾಡದಿದ್ದರೆ, ನಂತರ ಪ್ಯಾನ್ ಕಾರ್ಡ್ ನಿಷ್ಕ್ರಿಯವಾಗುತ್ತದೆ. ಇದರಿಂದ ಹಲವು ಸಮಸ್ಯೆಗಳನ್ನು ಎದುರಿಸಬೇಕಾಗಬಹುದು. ಒಂದು ವೇಳೆ ನೀವು ತೆರಿಗೆದಾರರಾಗಿದ್ದು, ನಿಮ್ಮ ಪ್ಯಾನ್‌ ಕಾರ್ಡ್‌ ನಿಷ್ಕ್ರಿಯವಾದರೆ, ನಿಮಗೆ ತೆರಿಗೆ ಮರುಪಾವತಿ ನೀಡಲಾಗುವುದಿಲ್ಲ. PAN ನಿಷ್ಕ್ರಿಯವಾಗಿರುವ ಅವಧಿಗೆ ಮರುಪಾವತಿಗೆ ಯಾವುದೇ ಬಡ್ಡಿಯನ್ನು ಪಾವತಿಸಲಾಗುವುದಿಲ್ಲ. ಅಂತಹ ತೆರಿಗೆದಾರರಿಂದ ಹೆಚ್ಚಿನ TDS ಮತ್ತು TCS ಅನ್ನು ವಿಧಿಸಲಾಗುತ್ತದೆ.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

19 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

20 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

20 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

20 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago