ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಪೊಲೀಸ್ ಇಲಾಖೆಯ ತಂಡವು ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆ ಹಾಗೂ ಕೋಪ್ಟಾ -2003 ಕಾಯಿದೆ ಉಲ್ಲಂಘನೆ ವಿರುದ್ದ ನಗರದ ಹೊರವಲಯದ ದೇರಳಕಟ್ಟೆ ಪರಿಸರದಲ್ಲಿ ಕಾರ್ಯಾಚರಣೆ ನಡೆಸಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳಗಳಾದ ಬಸ್‍ಸ್ಟಾಂಡ್, ರಸ್ತೆ ಬದಿಗಳಲ್ಲಿ, ಅಂಗಡಿ ವಠಾರ ಮತ್ತಿತರ ಸ್ಥಳಗಳಲ್ಲಿ ಹಲವು ಮಂದಿ ಬಹಿರಂಗವಾಗಿಯೇ ಪಾನ್ ಮಸಾಲೆ ಹಾಗೂ ತಂಬಾಕು ಉತ್ಪನ್ನಗಳನ್ನು ತಿನ್ನುತ್ತಿದ್ದವರ ವಿರುದ್ಧ ಸ್ಥಳದಲ್ಲಿಯೇ ಪ್ರಕರಣ ದಾಖಲಿಸಿಕೊಂಡಿದೆ. ಒಟ್ಟು 32 ಪ್ರಕರಣ ದಾಖಲಿಸಿ ರೂ. 3100 ದಂಡ ವಿಧಿಸಲಾಯಿತು.
ಇದೇ ಸಂದರ್ಭದಲ್ಲಿ ಕೋಪ್ಟಾ ಕಾಯಿದೆ ಕುರಿತಂತೆ ಅಂಗಡಿ ಹಾಗೂ ಹೋಟೇಲ್ ಮಾಲಿಕರಿಗೆ ಮಾಹಿತಿ ನೀಡಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ಪಾನ್ ಮಸಾಲ ಹಾಗೂ ತಂಬಾಕು ಉತ್ಪನ್ನಗಳನ್ನು ತಿನ್ನದಂತೆ ಗ್ರಾಹಕರಿಗೆ ಸೂಚಿಸಲು ಅಂಗಡಿ ಮಾಲೀಕರಿಗೆ ಸೂಚಿಸಲಾಯಿತು. ಅಲ್ಲದೇ, ಈ ಕುರಿತು ಸಹಕರಿಸದಿದ್ದರೆ, ಕಾಯಿದೆಯನ್ವಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಯಿತು.
ಜಗಿಯುವ ತಂಬಾಕು ಹಾಗೂ ಪಾನ್ ಮಸಾಲ ಉತ್ಪನ್ನಗಳನ್ನು ಜಗಿದು ಉಗಿಯುವುದರಿಂದ ಕೋವಿಡ್ 19 ಹಾಗೂ ಇತರೆ ಸಾಂಕ್ರಾಮಿಕ ರೋಗಗಳು ಇತರರಿಗೆ ಹರಡುವ ಸಂಭವ ಅಧಿಕವಾಗಿದೆ. ಪ್ರಸಕ್ತ ಕೋವಿಡ್ ವ್ಯಾಪಕವಾಗಿರುವುದರಿಂದ ಈ ರೀತಿ ಪಾನ್ ಮಸಾಲೆ ತಿಂದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಹೆಚ್ಚು ಅಪಾಯಕಾರಿಯಾಗಿದೆ. ಇಂತಹ ಉಗುಳನ್ನು ಇತರ ಸಾರ್ವಜನಿಕರಿಗೆ ನಡೆದುಕೊಂಡು ಹೋಗುವಾಗ ಗೊತ್ತಿಲ್ಲದೇ ಮೆಟ್ಟುವುದರಿಂದ ಇದು ಸಾಂಕ್ರಾಮಿಕ ರೋಗ ಹಬ್ಬಲೂ ಕಾರಣವಾಗುತ್ತಿದೆ.
ಈ ಕಾರ್ಯಾಚರಣೆಯಲ್ಲಿ ಹಿರಿಯ ಆಹಾರ ಸುರಕ್ಷತಾಧಿಕಾರಿ ರಾಜು, ಸಮಾಜ ಕಾರ್ಯಕರ್ತೆ ಶ್ರುತಿ ಸಾಲ್ಯಾನ್, ಕೋಣಾಜೆ ಠಾಣಾ ಪೊಲೀಸ್ ಉಪ ನಿರೀಕ್ಷಕ ಶರಣಪ್ಪ , ಸಿಬ್ಬಂದಿ ಪುನೀತ್, ವಿದ್ಯಾ ಮತ್ತಿತರು ಉಪಸ್ಥಿತರಿದ್ದರು.
ಮುಂದಿನ ದಿನಗಳಲ್ಲಿ ಕಾರ್ಯಾಚರಣೆಯನ್ನು ಇನ್ನಷ್ಟು ತೀವ್ರಗೊಳಿಸಲಾಗುವುದು ಎಂದು ಆಹಾರ ಸುರಕ್ಷತಾಧಿಕಾರಿಗಳು ತಿಳಿಸಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…