ಬೆಂಗಳೂರು: ಕಿಂಚಿತ್ ಅಮಲು ಪದಾರ್ಥ ಬೆರಕೆ ಮಾಡಿದರೂ ಕರ್ನಾಟಕದಲ್ಲಿ ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಮಾರಾಟ ನಿಷೇಧ ಮಾಡುವುದಾಗಿ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ಬುಧವಾರ 32 ಪಾನ್ ಮಸಾಲಾ ಮಾದರಿಗಳನ್ನು ಸಂಗ್ರಹಿಸಿದ್ದಾರೆ.
ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ರಾಜ್ಯಾದ್ಯಂತ ವಿವಿಧೆಡೆ ಕಾರ್ಯಾಚರಣೆ ನಡೆಸಿ 32 ಪಾನ್ ಮಸಾಲಾ ಮಾದರಿಗಳನ್ನು ಸಂಗ್ರಹಿಸಿದ್ದಾರೆ.
ಪ್ರಮುಖವಾಗಿ, ಬೆಂಗಳೂರು, ಮೈಸೂರು, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್, ಬೆಳಗಾವಿ, ಬಳ್ಳಾರಿ ಜಿಲ್ಲೆಗಳ ಪಾನ್ ಮಸಾಲಾ ಮಾರಾಟ ಮಳಿಗೆಗಳಿಂದ ಮಾದರಿ ಸಂಗ್ರಹಿಸಲು ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ. ಈ ಪೈಕಿ ಬುಧವಾರ ಕೆಲವು ಮಳಿಗೆಗಳಿಂದ 32 ಸ್ಯಾಂಪಲ್ಸ್ ಸಂಗ್ರಹಿಸಿದ್ದು, ಗುರುವಾರವೂ ರಾಜ್ಯದ ವಿವಿಧೆಡೆ ಕಾರ್ಯಾಚರಣೆ ಮುಂದುವರೆಯುವ ಸಾಧ್ಯತೆಗಳಿವೆ.
ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ: ಇತ್ತೀಚೆಗೆ ಬೆಂಗಳೂರಿನ ಕಂಠೀರವ ಕ್ರೀಡಾಂಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದರಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅವರು, ‘ಪಾನ್ ಮಸಾಲಾ, ಗುಟ್ಕಾ ಮತ್ತಿತರ ಪದಾರ್ಥಗಳಲ್ಲಿ ಅಮಲು ಬರುವ ವಸ್ತುಗಳನ್ನು ಬೆರಕೆ ಮಾಡಿ ಮಾರಾಟ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಶೀಘ್ರ ಇದನ್ನು ಪರಿಶೀಲಿಸುತ್ತೇವೆ. ಈ ಸಂಗತಿ ನಿಜವಾದರೆ, ಕೂಡಲೇ ನಿಲ್ಲದಿದ್ದರೆ, ಎಲ್ಲ ರೀತಿಯ ಪಾನ್ ಮಸಾಲಾ, ಗುಟ್ಕಾ ಪದಾರ್ಥಗಳ ಮಾರಾಟವನ್ನು ಕರ್ನಾಟಕದಲ್ಲಿ ನಿಷೇಧ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದರು. ಇದೀಗ ಅದರ ಬೆನ್ನಲ್ಲೇ ಇಲಾಖೆಯು ಚುರುಕು ಕಾರ್ಯಾಚರಣೆ ಕೈಗೊಂಡಿದೆ.
ಜ್ಞಾಪನ ಪತ್ರ ಹೊರಡಿಸಿದ್ದ ಆಯುಕ್ತರು: ರಾಜ್ಯಾದ್ಯಂತ ಮಾರಾಟ ಮಾಡಲಾಗುವ ಪಾನ್ ಮಸಾಲ ಹಾಗೂ ಪಾನ್‌ನಿಂದ ತಯಾರಿಸುವ ಇತರೆ ಉತ್ಪನ್ನಗಳ ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಜೂ.30 ಮತ್ತು ಜು.1ರಂದು ವಿಶೇಷ ಆಂದೋಲನ ಕೈಗೊಳ್ಳುವ ಮುಖಾಂತರ ಪಾನ್ ಮಸಾಲ ಹಾಗೂ ಪಾನ್‌ನಿಂದ ತಯಾರಿಸುವ ಇತರೆ ಉತ್ಪನ್ನಗಳ ಕಾನೂನಾತ್ಮಕ ಆಹಾರ ಮಾದರಿಗಳನ್ನು ಸಂಗ್ರಹಿಸಬೇಕು. ಅವುಗಳ ವಿಶ್ಲೇಷಣೆಗಾಗಿ ತಮ್ಮ ವಿಭಾಗಕ್ಕೆ ಸಂಬಂಧಿಸಿದ ಸರ್ಕಾರಿ ಆಹಾರ ಪ್ರಯೋಗಾಲಯಗಳಿಗೆ (ರಾಜ್ಯ ಮತ್ತು ವಿಭಾಗೀಯ ಆಹಾರ ಪ್ರಯೋಗಾಲಯ) ವಿಶ್ಲೇಷಣೆಗಾಗಿ ಕಳುಹಿಸಬೇಕು.
ಅಲ್ಲದೆ, ಪಾನ್ ಮಸಾಲ ಹಾಗೂ ಪಾನ್‌ನಿಂದ ತಯಾರಿಸುವ ಇತರೆ ಉತ್ಪನ್ನಗಳ ಸಗಟು ಮಳಿಗೆಗಳಿಗೆ ಪರಿಶೀಲನಾ ಭೇಟಿ ನೀಡಿ ತಪಾಸಣೆ ಕೈಗೊಳ್ಳಬೇಕು. ಆಹಾರ ಮಾದರಿಯ ಸಂಗ್ರಹಣೆಯ ವಿವರಗಳನ್ನು ಪ್ರಯೋಗಾಲಯದ ಹೆಸರಿನೊಂದಿಗೆ ದಾಖಲಿಸಬೇಕು. ಈ ಕಾರ್ಯಾಚರಣೆಯ ಮೇಲ್ವಿಚಾರಣೆಯನ್ನು ಆಯಾ ಜಿಲ್ಲಾ ಅಂಕಿತಾಧಿಕಾರಿಗಳು ನಡೆಸಿ ಕೇಂದ್ರ ಕಚೇರಿಗೆ ವರದಿ ಸಲ್ಲಿಸುವಂತೆ ಆಹಾರ ಸುರಕ್ಷತೆ ಮತ್ತು ಔಷಧ ನಿರ್ವಹಣಾ ಇಲಾಖೆಯ ಅಧಿಕಾರಿಗಳು ಜೂ.29ರಂದು ಜ್ಞಾಪನ ಪತ್ರ ಹೊರಡಿಸಿದ್ದರು.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್‌ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]