ಚೆನ್ನೈ: ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಯೋಧರ ಪಾರ್ಥಿವ ಶರೀರ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಯೋಧರ ಮೃತದೇಹಗಳನ್ನು ಮದ್ರಾಸ್ ರೆಜಿಮೆಂಟಲ್ ಸೆಂಟರ್ (ಎಂಆರ್‌ಸಿ) ಕುನ್ನೂರಿನ ವೆಲ್ಲಿಂಗ್‌ಟನ್‌ನಿಂದ ಸುಲೂರ್ ಏರ್ ಬೇಸ್‌ಗೆ ಕೊಂಡೊಯ್ಯಲಾಗುತ್ತಿತ್ತು. ಆದರೆ ಚಾಲಕನ ನಿಯಂತ್ರಣ ತಪ್ಪಿದ ಆಂಬ್ಯುಲೆನ್ಸ್ ಮಾರ್ಗಮಧ್ಯೆ ಅಪಘಾತವಾಗಿದೆ. ಈ ದುರಂತದಲ್ಲಿ ಪೊಲೀಸರ ಇಲಾಖೆಯ ಕೆಲ ಸಿಬ್ಬಂದಿಗೆ ಗಾಯವಾಗಿದೆ. ಸೂಲೂರು ವಾಯುನೆಲೆಯಿಂದ ಸುಮಾರು 45 ಕಿ.ಮೀ ದೂರದಲ್ಲಿ ಅಪಘಾತ ಸಂಭವಿಸಿದೆ.
ಸಿಡಿಎಸ್ ಬಿಪಿನ್ ರಾವತ್ ಅವರ ಪಾರ್ಥಿವ ಶರೀರವನ್ನು ಶುಕ್ರವಾರ ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ದೆಹಲಿಯ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗುವುದು. ಬಳಿಕ ಕಾಮರಾಜ ಮಾರ್ಗದಿಂದ ಬೇರಾರ್ ಕ್ರಾಸ್‌ವರೆಗೆ ಅಂತ್ಯಕ್ರಿಯೆ ನಡೆಸಲಾಗುವುದು. ದೆಹಲಿ ಕಂಟೋನ್ಮೆಂಟ್‌ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಆಂಬ್ಯುಲೆನ್ಸ್ ವಿಮಾನ ನಿಲ್ದಾಣದತ್ತ ಸಾಗುತ್ತಿದ್ದಾಗ ದಾರಿಯಲ್ಲಿ ನಿಂತಿದ್ದ ಜನರು ಪುಷ್ಪವೃಷ್ಟಿ ಮಾಡುವ ಮೂಲಕ ನಾಡಿನ ವೀರಯೋಧನಿಗೆ ಅಂತಿಮ ವಿದಾಯ ಹೇಳಿದರು. ಎಲ್ಲಾ 13 ಮೃತದೇಹಗಳನ್ನು ಭಾರತೀಯ ವಾಯುಪಡೆಯ C-130J ಸೂಪರ್ ಹರ್ಕ್ಯುಲಸ್ ಸಾರಿಗೆ ವಿಮಾನದಲ್ಲಿ ಸೂಲೂರಿನಿಂದ ದೆಹಲಿಗೆ ಹಾರಿಸಲಾಯಿತು. ಆಗಲೇ ವಾಯುಪಡೆ ಮುಖ್ಯಸ್ಥರು ಅಲ್ಲಿಂದ ದೆಹಲಿಗೆ ಹೊರಟಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…