Featured

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ

ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಪಾಸ್‌ಪೋರ್ಟ್ ಶುಲ್ಕವನ್ನ ಹೆಚ್ಚಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ. ಇನ್ನು ಈ ಹೊಸ ದರ ಜುಲೈ 1 ರಿಂದ ಜಾರಿಯಾಗಲಿದೆ.

ಪ್ರಮಾಣಿತ ಅಂದ್ರೆ ಸಾಮಾನ್ಯ ಪಾಸ್‌ಪೋರ್ಟ್ ಪಡೆಯುವ ಶುಲ್ಕ 2,500 ರೂ.ಗಳಿಗೆ ಹಾಗೂ ತತ್ಕಾಲ್ ಯೋಜನೆ ಅಡಿಯಲ್ಲಿ ಪಾಸ್‌ಪೋರ್ಟ್ ಪಡೆಯುವ ಶುಲ್ಕವನ್ನು 5,000 ರೂ.ಗಳಿಗೆ ಹೆಚ್ಚಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಹೊಸ ದರಗಳ ಅಡಿಯಲ್ಲಿ 18 ಅಥವಾ 18 ವರ್ಷಕ್ಕಿಂತ ಮೇಲ್ಪಟ್ಟ ವಯಸ್ಸಿನ ಅರ್ಜಿದಾರರಿಗೆ 36 ಪುಟಗಳ ಪಾಸ್‌ಪೋರ್ಟ್ ಶುಲ್ಕವನ್ನ 1,500 ರೂ.ನಿಂದ 2,500 ರೂ.ಗಳಿಗೆ ಹೆಚ್ಚಿಸಲಾಗಿದೆ. ತತ್ಕಾಲ್ ಶುಲ್ಕವನ್ನು 3,500 ರೂ.ಗಳಿಂದ 5,000 ರೂ.ಗಳಿಗೆ ಏರಿಕೆ ಮಾಡಲಾಗಿದೆ.

ಅದೇ ರೀತಿ, 60 ಪುಟಗಳ ಪಾಸ್‌ಪೋರ್ಟ್‌ನ ಶುಲ್ಕವನ್ನು ಸಾಮಾನ್ಯ ವರ್ಗದ ಅಡಿಯಲ್ಲಿ 2,000 ರೂ.ಗಳಿಂದ 3,500 ರೂ.ಗಳಿಗೆ ಮತ್ತು ತತ್ಕಾಲ್ ಅಡಿಯಲ್ಲಿ 6,000 ರೂ.ಗಳಿಗೆ ಕೇಂದ್ರ ಹೆಚ್ಚಿಸಿದೆ.

ಕಳೆದುಹೋದ ಅಥವಾ ಹಾನಿಗೊಳಗಾದ ಪಾಸ್‌ಪೋರ್ಟ್ ಬದಲಿಸಲು (36 ಪುಟ) 5,000 ರೂ., ತತ್ಕಾಲ್‌ನಲ್ಲಿ 7,500 ರೂ. ಶುಲ್ಕ ಪಾವತಿಸಬೇಕಾಗುತ್ತದೆ. 60 ಪುಟಗಳ ಬದಲಿ ಪಾಸ್‌ಪೋರ್ಟ್‌ಗೆ ಸಾಮಾನ್ಯಕ್ಕೆ 6,000 ರೂ. ಹಾಗೂ ತತ್ಕಾಲ್‌ನಲ್ಲಿ 8,500 ರೂ. ಪಾವತಿ ಮಾಡಬೇಕಾಗುತ್ತದೆ.

ಇನ್ನೂ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಅರ್ಜಿದಾರರಿಗೆ 36 ಪುಟಗಳ ಹೊಸ ಅಥವಾ ಮರು ಪಾಸ್‌ಪೋರ್ಟ್‌ಗೆ ಸಾಮಾನ್ಯ ಯೋಜನೆ ಅಡಿಯಲ್ಲಿ 1,750 ರೂ. ಹಾಗೂ ತತ್ಕಾಲ್ ಅಡಿಯಲ್ಲಿ 4,250 ರೂ. ಶುಲ್ಕವಾಗಲಿದೆ. ಜೊತೆಗೆ ಅಪ್ರಾಪ್ತ ವಯಸ್ಕರು ಕಳೆದುಹೋದ ಅಥವಾ ಹಾನಿಗೊಳಗಾದ ಪಾಸ್‌ಪೋರ್ಟ್ ಬದಲಾಯಿಸಲು ಸಾಮಾನ್ಯ ಯೋಜನೆ ಅಡಿ 4,250 ರೂ. ಹಾಗೂ ತತ್ಕಾಲ್ ಅಡಿಯಲ್ಲಿ 6,750 ರೂ. ನಿಗದಿಪಡಿಸಲಾಗಿದೆ.

ಪೊಲೀಸ್ ಕ್ಲಿಯರೆನ್ಸ್ ಪ್ರಮಾಣಪತ್ರಗಳು, ಶರಣಾಗತಿ ಪ್ರಮಾಣಪತ್ರಗಳು, ವಿದೇಶಿ ಕಾರ್ಯಕ್ರಮದ ಪರಿಶೀಲನೆ ಮತ್ತು ಇತರ ವಿವಿಧ ಪಾಸ್‌ಪೋರ್ಟ್-ಸಂಬಂಧಿತ ಪ್ರಮಾಣಪತ್ರಗಳ ಶುಲ್ಕವನ್ನ ಭಾರತದಲ್ಲಿ 750 ರೂ. ಮತ್ತು ವಿದೇಶದಲ್ಲಿ 40 ಡಾಲರ್‌ಗಳಿಗೆ ನಿಗದಿಪಡಿಸಲಾಗಿದೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

1 hour ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

2 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

2 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

2 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

2 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

4 hours ago