ಬೆಂಗಳೂರು : ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಪಿಂಚಣಿ ಮಂಜೂರಾತಿಗೆ ‘ಹಲೋ ಕಂದಾಯ ಸಚಿವರೇ’ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆ ಒಳಗಾಗಿ ಅರ್ಹ ಫಲಾನುಭವಿಗಳಿಗೆ ಮನೆ ಬಾಗಿಲಿಗೇ ಪಿಂಚಣಿ ಬರಲಿದೆ.
ಕಂದಾಯ ಇಲಾಖೆಯಲ್ಲಿ ಸಾಮಾಜಿಕ ಪಿಂಚಣಿ ಯೋಜನೆಯಡಿ ವೃದ್ದರು, ಅಂಗವಿಕಲರು, ವಿಚ್ಛೇದಿತ ಮಹಿಳೆಯರು ಸೇರಿ 9 ರೀತಿಯ ಮಾಸಿಕ ಪಿಂಚಣಿ ಯೋಜನೆಗಳು ಚಾಲ್ತಿಯಲ್ಲಿವೆ.
ಪಿಂಚಣಿ ಸೌಲಭ್ಯ ಪಡೆಯುವುದು ಹೇಗೆ?
ನಾಗರಿಕರು ಶುಲ್ಕ ರಹಿತ ಸಂಖ್ಯೆ 155245ಗೆ ಉಚಿತವಾಗಿ ದೂರವಾಣಿ ಮೂಲಕ ಕಡ್ಡಾಯವಾಗಿ ತಮ್ಮ ಆಧಾರ್ ಸಂಖ್ಯೆ ಒದಗಿಸಿ ಪಿಂಚಣಿ ಸೌಲಭ್ಯ ಕೋರಿಕೆ ಸಲ್ಲಿಸಬಹುದು
ತಮ್ಮ ವ್ಯಾಪ್ತಿಯ ಗ್ರಾಮ ಲೆಕ್ಕಾಧಿಕಾರಿಗಳು ಅರ್ಜಿದಾರರ ಮನೆ ಬಾಗಿಲಿಗೆ ಭೇಟಿ ನೀಡಿ `ನವೋದಯ’ ಮೊಬೈಲ್ ಆಯಪ್ ಮೂಲಕ ಅರ್ಜಿದಾರರಿಂದ ಮಾಹಿತಿ ಹಾಗೂ ದಾಖಲಾತಿಗಳ ಸಂಗ್ರಹ.
ಗ್ರಾಮ ಲೆಕ್ಕಾಧಿಕಾರಿಗಳು ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸಲ್ಲಿಸಬೇಕಾದ ದಾಖಲೆಗಳು
ಕಡ್ಡಾಯವಾಗಿ ಆಧಾರ್ ಕಾರ್ಡ್
ಬ್ಯಾಂಕ್/ ಅಂಚೆ ಖಾತೆ ವಿವರದ ಪ್ರತಿ
ವಿಳಾಸ ಮತ್ತು ವಯಸ್ಸಿಗೆ ಸಂಬಂಧಿಸಿದ ದಾಖಲಾತಿ (ಪಡಿತರ ಚೀಟಿ, ಚುನಾವಣೆ ಗುರುತಿನ ಚೀಟಿ ಅಥವಾ ಸರ್ಕಾರ ವಿತರಿಸಿದ ಗುರುತಿನ ಚೀಟಿ)
ಮೊಬೈಲ್ ಆಯಪ್ ಮೂಲಕ ಭಾವಚಿತ್ರ ಸೆರೆಹಿಡಿಯವುದು
ಅರ್ಹರಿಗೆ 72 ಗಂಟೆಯೊಳಗೆ ನಾಡ ಕಚೇರಿ ಉಪ ತಹಸೀಲ್ದಾರರಿಂದ ಪಿಂಚಣಿ ಮಂಜೂರಾತಿ ಅನುಮೋದನೆ
ಫಲಾನುಭವಿಗಳ ಮನೆಬಾಗಿಲಿಗೆ ಪಿಂಚಣಿ ಮಂಜೂರಾತಿ ಆದೇಶ ವಿತರಣೆ ಮಾಡಲಾಗುವುದು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…