ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ: ರಾಜ್ಯದ 41.40 ಲಕ್ಷ ರೈತರ ಖಾತೆಗೆ ನೇರ ಹಣ ವರ್ಗಾವಣೆ – vishwanews24

Featured, ರಾಜ್ಯ ನ್ಯೂಸ್

ಪಿಎಂ ಕಿಸಾನ್ ಯೋಜನೆಯ ಹಣ ಬಿಡುಗಡೆ: ರಾಜ್ಯದ 41.40 ಲಕ್ಷ ರೈತರ ಖಾತೆಗೆ ನೇರ ಹಣ ವರ್ಗಾವಣೆ

ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಅಡಿಯಲ್ಲಿ 22ನೆ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.

ಪ್ರಧಾನಿ ಮೋದಿ ಮಾ.13 ಸಂಜೆ 5 ಗಂಟೆಗೆ ಅಸ್ಸಾಂನ ಗುವಾಹಟಿಯಲ್ಲಿ ಆಯೋಜಿಸಲಾದ ಬೃಹತ್ ಸಮಾರಂಭದಲ್ಲಿ ದೇಶಾದ್ಯಂತದ ರೈತರಿಗೆ ಹಣ ಬಿಡುಗಡೆಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕದ ಒಟ್ಟು 41,40,106 ರೈತ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದೆ. ಕೇಂದ್ರ ಸರಕಾರವು ರಾಜ್ಯದ ರೈತರಿಗಾಗಿ ಒಟ್ಟು 828.02ಕೋಟಿ ರೂ.ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ (DBT) ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಿದೆ.

ಇದನ್ನೂ ಓದಿ :

ಕಾರು ಪಲ್ಟಿ  :  ಇಬ್ಬರು ಸ್ಥಳದಲ್ಲೇ ಸಾವು ; ಮತ್ತಿಬ್ಬರು ಗಂಭೀರ – vishwanews24

ಮಾ.13ರಂದು ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮವನ್ನು ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ‘ಪಿ.ಎಂ. ಕಿಸಾನ್ ಉತ್ಸವ ದಿವಸ’ ಎಂದು ಆಚರಿಸಲಾಗುತ್ತಿದ್ದು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಅರ್ಹ ರೈತರು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವುದನ್ನು ಖಚಿತಪಡಿಸಿಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‍ಸೈಟ್ pmkisan.gov.inಗೆ ಭೇಟಿ ನೀಡಬಹುದು ಎಂದು ಅಪರ ಕೃಷಿ ನಿರ್ದೇಶಕರು(ಮಾಹಿತಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ :

ಅಪರೇಷನ್ ಕಮಲ ಭೀತಿ: ಅಸ್ಸಾಂನ 10 ಮಂದಿ ಕಾಂಗ್ರೆಸ್​​ ಶಾಸಕರು ಬಿಡದಿ ರೆಸಾರ್ಟ್​ಗೆ ಶಿಫ್ಟ್​ – vishwanews24

Leave a Reply