ಬೆಂಗಳೂರು: ಕೇಂದ್ರ ಸರಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ‘ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಅಡಿಯಲ್ಲಿ 22ನೆ ಕಂತಿನ ಆರ್ಥಿಕ ನೆರವನ್ನು ಬಿಡುಗಡೆ ಮಾಡಲು ಸರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಪ್ರಧಾನಿ ಮೋದಿ ಮಾ.13 ಸಂಜೆ 5 ಗಂಟೆಗೆ ಅಸ್ಸಾಂನ ಗುವಾಹಟಿಯಲ್ಲಿ ಆಯೋಜಿಸಲಾದ ಬೃಹತ್ ಸಮಾರಂಭದಲ್ಲಿ ದೇಶಾದ್ಯಂತದ ರೈತರಿಗೆ ಹಣ ಬಿಡುಗಡೆಗೆ ಚಾಲನೆ ನೀಡಲಿದ್ದಾರೆ. ಕರ್ನಾಟಕದ ಒಟ್ಟು 41,40,106 ರೈತ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲಿದೆ. ಕೇಂದ್ರ ಸರಕಾರವು ರಾಜ್ಯದ ರೈತರಿಗಾಗಿ ಒಟ್ಟು 828.02ಕೋಟಿ ರೂ.ಗಳ ಆರ್ಥಿಕ ನೆರವನ್ನು ನೇರ ನಗದು ವರ್ಗಾವಣೆ (DBT) ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಿದೆ.
ಇದನ್ನೂ ಓದಿ :
ಮಾ.13ರಂದು ನಡೆಯಲಿರುವ ಈ ಐತಿಹಾಸಿಕ ಕಾರ್ಯಕ್ರಮವನ್ನು ರಾಜ್ಯದ ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ವೀಕ್ಷಿಸಲು ವ್ಯವಸ್ಥೆ ಮಾಡಲಾಗಿದೆ. ಈ ಕಾರ್ಯಕ್ರಮವನ್ನು ‘ಪಿ.ಎಂ. ಕಿಸಾನ್ ಉತ್ಸವ ದಿವಸ’ ಎಂದು ಆಚರಿಸಲಾಗುತ್ತಿದ್ದು, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಕೃಷಿ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.
ಅರ್ಹ ರೈತರು ತಮ್ಮ ಇ-ಕೆವೈಸಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿರುವುದನ್ನು ಖಚಿತಪಡಿಸಿಕೊಳ್ಳುವುದು. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್‍ಸೈಟ್ pmkisan.gov.inಗೆ ಭೇಟಿ ನೀಡಬಹುದು ಎಂದು ಅಪರ ಕೃಷಿ ನಿರ್ದೇಶಕರು(ಮಾಹಿತಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…