ಎಪ್ರೀಲ್-2022 ರಿಂದ ಜುಲೈ-2022 ರ ವರೆಗಿನ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಆರ್ಥಿಕ ನೆರವು ಪಡೆಯಲು ಇ-ಕೆವಾಯ್‍ಸಿ ಮಾಡಿಸುವುದು ಕಡ್ಡಾಯವಾಗಿದೆ.
ಇ-ಕೆವಾಯ್‍ಸಿ ಮಾಡಿಸಲು ರೈತರು ಕೇಂದ್ರ ಸರ್ಕಾರದ ಜಾಲ ತಾಣವಾದ https://pmkisan.gov.in/ ಪೋರ್ಟಲ್‍ನ ಪಾರಮರ್ ಕಾರ್ನರ್‍ನ ಇ-ಕೆವಾಯ್‍ಸಿ ಅವಕಾಶದಡಿ ರೈತನ (ಫಲಾನುಭವಿ) ಆಧಾರ ಸಂಖ್ಯೆಯನ್ನು ನಮೂದಿಸಿ ನಂತರ ಆಧಾರ ಸಂಖ್ಯೆ ಯೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಯನ್ನು ದಾಖಲಿಸಬೇಕು. ಆಧಾರ ಕಾರ್ಡನೊಂದಿಗೆ ನೊಂದಣಿಯಾದ ಮೊಬೈಲ್ ಸಂಖ್ಯೆಗೆ ಓಟಿಪಿ ರವಾನೆಯಾಗುತ್ತದೆ. ನಂತರ ಸ್ವೀಕರಿಸಿದ OTP ಯನ್ನು ದಾಖಲಿಸಿ ಸಬ್‍ಮಿಟ್ ಪಾರ್ ಯುತ್ ಎಂಬ ಬಟನ್ ಒತ್ತಬೇಕು. ಆಗ ತಂತ್ರಾಂಶ ಆಧಾರಿತ ಪರಿಶೀಲನೆ ನಡೆದು ಇ-ಕೆವಾಯ್‍ಸಿ ಸೆಕ್ಸಸ್ ಸಬ್‍ಮಿಟೆಡ್ ಎಂಬ ವಾಕ್ಯವು ಗೋಚರಿಸುತ್ತದೆ. ಹೀಗೆ ಮೊಬೈಲ್ ಓಟಿಪಿ ಆಧಾರಿತವಾಗಿ ಫಲಾನುಭವಿಯು ಖುದ್ದಾಗಿ ಇ-ಕೆವಾಯ್‍ಸಿ ಮಾಡಬಹುದಾಗಿದೆ.
ಯಾವ ಫಲಾನುಭವಿಯ ಮೊಬೈಲ್ ಸಂಖ್ಯೆ ಆಧಾರ ಸಂಖ್ಯೆಯೊಂದಿಗೆ ಜೋಡಣೆಯಾಗಿರುವುದಿಲ್ಲವೋ ಅಥವಾ ಯಾವ ಮೊಬೈಲ್ ಸಂಖ್ಯೆಗೆ ಇ-ಕೆವಾಯ್‍ಸಿಗಾಗಿ ಕಳುಹಿಸಿದ ಓಟಿಪಿಯು ಸ್ವೀಕೃತವಾಗಿರುವುದಿಲ್ಲವೋ ಅಂತಹ ಫಲಾನುಭವಿಗಳು ಸಮೀಪದ ನಾಗರಿಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಅಲ್ಲಿ ಬಯೋಮೆಟ್ರಿಕ್ ಯಂತ್ರದ ಮೂಖಾಂತರ ಇ-ಕೆವಾಯ್‍ಸಿ ಮಾಡಿಸಬಹುದಾಗಿದೆ. ಇಲ್ಲಿ ಕೈ ಬೆರಳಿನ ಗುರುತು ಆಧಾರದ ಮೇಲೆ ಇ-ಕೆವಾಯ್‍ಸಿ ಮಾಡಲಾಗುತ್ತದೆ. 2 ನೇ ಪ್ರಕ್ರಿಯೆ (ವಿಧಾನ) ಗಾಗಿ ಮಾತ್ರ ನಾಗರಿಕ ಸೇವಾ ಕೇಂದ್ರದವರಿಗೆ 15 ರೂ.ಗಳನ್ನು ಫಲಾನುಭವಿಯು ಪಾವತಿಸಬೇಕು. ಹೆಚ್ಚಿನ ಮಾಹಿತಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗೆ ಭೇಟಿ ನೀಡಬಹುದು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…