ಪಿಎಂ ಕಿಸಾನ್ ಯೋಜನೆ : ಒಂದು ತಿಂಗಳಲ್ಲಿ ಮೊದಲ ಕಂತು ಪಾವತಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ ಮುಖ್ಯಮಂತ್ರಿ ಬಿ.ಎಸ್. ವೈ -Vishwanews24
ಬೆಂಗಳೂರು: ಕೇಂದ್ರ ಸರ್ಕಾರವು ರೈತರಿಗೆ ಪಿಎಂ ಕಿಸಾನ್ ಸಮ್ಮಾನ್ ಯೋಜನೆಯಡಿ ವಾರ್ಷಿಕ 6000 ರೂಪಾಯಿ ನೆರವು ನೀಡುವ ಯೋಜನೆಗೆ ಪೂರಕವಾಗಿ ಕರ್ನಾಟಕ ಸರ್ಕಾರವು ಘೋಷಿಸಿರುವ 4000 ರೂಪಾಯಿ ನೆರವಿನ ಯೋಜನೆ ಜಾರಿಗೆ ಇನ್ನೆರಡು ದಿನಗಳಲ್ಲಿ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದ್ದಾರೆ.
ಮೊದಲ ಕಂತಿನ 2000 ರೂಪಾಯಿಗಳನ್ನು 15-20 ದಿನಗಳೊಳಗೆ ರೈತರಿಗೆ ಪಾವತಿಸಲು ಕ್ರಮ ವಹಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪಿಎಂಕಿಸಾನ್ ಯೋಜನೆಯಿಂದ ಬರದಿಂದ ಸಂಕಷ್ಟಕ್ಕೊಳಗಾಗಿರುವ ರೈತನಿಗೆ ಅಲ್ಪ ನೆರವಾದರೂ ದೊರೆಯಲಿದೆ ಎಂದು ಅವರು ಅಭಿಪ್ರಾಯಪಟ್ಟರು.
