ಪಿಎಫ್‌‌ಐ, ಎಸ್‌‌ಡಿಪಿಐ ನ ಎಲ್ಲಾ ರಾಜ್ಯ ನಾಯಕರನ್ನು ಬಂಧಿಸಬೇಕು : ವಿಶ್ವ ಹಿಂದೂ ಪರಿಷತ್ -Vishwanews24

ಉಡುಪಿ: ಸರಕಾರವು, ಬೆಂಗಳೂರಿನಲ್ಲಿ ಗಲಭೆಗೆ ಕಾರಣವಾದ ಸಂಘಟನೆಯನ್ನು ಶೀಘ್ರವೇ ನಿಷೇದಿಸಬೇಕು. ಪಿಎಫ್‌‌ಐ, ಎಸ್‌‌ಡಿಪಿಐ ನ ಎಲ್ಲಾ ರಾಜ್ಯ ನಾಯಕರನ್ನು ಬಂಧಿಸಬೇಕು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ.

 

 

ಈ ಬಗ್ಗೆ ಉಡುಪಿಯ ಪ್ರೆಸ್‌‌ ಕ್ಲಬ್‌ನಲ್ಲಿ ಮಾತನಾಡಿದ ಬಜರಂಗ ದಳ ರಾಜ್ಯ ಸಂಚಾಲಕ ಸುನಿಲ್ ಕೆ.ಆರ್ ಅವರು, ಬೆಂಗಳೂರಿನ ಗಲಭೆಗೆ ಕಾರಣವಾದ ಸಂಘಟನೆಯನ್ನು ಸರಕಾರ ಶೀಘ್ರವೇ ನಿಷೇಧಿಸಬೇಕು. ಪಾಕಿಸ್ತಾನದ ಐಎಸ್‌‌‌ಐ ಹಾಗೂ ಭಯೋತ್ಪದಕ ಸಂಘಟನೆಯು ಕುಮ್ಮಕ್ಕು ನೀಡುತ್ತಿದೆ. ಈ ಸಂಘಟನೆಗಳನ್ನು ಸರಕಾರ ಕೂಡಲೇ ಬಂಧಿಸಬೇಕು. ಅಲ್ಲದೇ, ಈ ಸಂಘಟನೆಗಳ ನಾಯಕರನ್ನೂ ಕೂಡಾ ಬಂಧಿಸಬೇಕು ಎಂದು  ತಿಳಿಸಿದ್ದಾರೆ.

ಶಾಸಕ ಅಖಂಡ ಶ್ರೀನಿವಾಸ್‌ ಅವರೊಂದಿಗೆ ನಾವಿದ್ದೇವೆ. ಅವರು ಭಯಪಡುವ ಅಗತ್ಯವಿಲ್ಲ. ಈ ಪ್ರಕರಣವನ್ನು ಎನ್‌‌‌ಐಎಗೆ ಹಸ್ತಾಂತರಿಸಲು ಆಯಾ ಜಿಲ್ಲಾ ಆಯೋಗಗಳಿಗೆ ಜ್ಞಾಪಕ ಪತ್ರವನ್ನು ಸಲ್ಲಿಸಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ಗೃಹ ಸಚಿವರ ಬದಲಾವಣೆಯ ಕುರಿತು ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ ಸುನೀಲ್ ಕೆ.ಆರ್, ಗೃಹ ಸಚಿವರ ಬದಲಾವಣೆಯನ್ನು ಸರ್ಕಾರದ ತೀರ್ಮಾನಕ್ಕೆ ಬಿಡಲಾಗಿದೆ. ನಾವು ಬೆಂಗಳೂರಿನಲ್ಲಿ ನಡೆದ ಘಟನೆಯನ್ನು ಖಂಡಿಸುತ್ತೇವೆ ಹಾಗೂ ಅಪರಾಧಿಗಳ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ಮನವಿ ಮಾಡುತ್ತಿದ್ದೇವೆ ಎಂದಿದ್ದಾರೆ.

ಈ ಸಂದರ್ಭ, ಉಡುಪಿ ವಿಶ್ವ ಹಿಂದೂ ಪರಿಷತ್‌ ಅಧ್ಯಕ್ಷ ವಿಷ್ಣುಮೂರ್ತಿ ಆಚಾರ್ಯ, ಕಾರ್ಯದರ್ಶಿ ದಿನೇಶ್‌ ಮೆಂಡನ್‌‌‌‌‌‌, ಬಜರಂಗದಳದ ಜಿಲ್ಲಾ ಸಂಚಾಲಕ ಸುರೇಂದ್ರ ಕೋಟೇಶ್ವರ ಹಾಗೂ ಇತರರು ಉಪಸ್ಥಿತರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago