Featured

ಪಿಎಸ್​ಐ ನೇಮಕಾತಿ ಅಕ್ರಮದ ಬಗ್ಗೆ ನಾವೇ ಸಿಐಡಿ ತನಿಖೆಗೆ ನೀಡಿದ್ದೇವೆ : ಸಿಎಂ ಬೊಮ್ಮಾಯಿ – Vishwanews24

ಪಿಎಸ್​ಐ ನೇಮಕಾತಿ ಅಕ್ರಮದ ಬಗ್ಗೆ ನಾವೇ ಸಿಐಡಿ ತನಿಖೆಗೆ ನೀಡಿದ್ದೇವೆ : ಸಿಎಂ ಬಸವರಾಜ ಬೊಮ್ಮಾಯಿ ..

ಮಹಿಳೆ ದಿವ್ಯಾ ಹಾಗರಗಿ ನಮ್ಮ ಪಕ್ಷದಲ್ಲಿ ಯಾವುದೇ ಜವಬ್ದಾರಿ ಹೊಂದಿಲ್ಲ..

ಕಲಬುರಗಿ: ಪಿಎಸ್​ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ದೂರು ಬಂದ ತಕ್ಷಣವೇ ಕೂಲಂಕುಶ ತನಿಖೆಗೆ ನಾವೇ ಸಿಐಡಿ ತನಿಖೆಗೆ ನೀಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ನಗರದ ಡಿ.ಆರ್ .ಮೈದಾನದಲ್ಲಿ ಮಾತನಾಡಿದ ಅವರು ಉತ್ತರ ಪತ್ರಿಕೆಯಲ್ಲಿ ವ್ಯತ್ಯಾಸ ಬಂದಿದ್ದರಿಂದ ಪ್ರಕರಣವನ್ನು ಸಿಐಡಿಗೆ ನಾವೇ ನೀಡಿದ್ದೇವೆ.ಸಿಐಡಿ ಹಲವಾರು ತಂಡದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.

ಸದ್ಯ ಶಿಕ್ಷಣ ಸಂಸ್ಥೆ ಮುಖ್ಯಸ್ಥರು ಪರಾರಿಯಾಗಿದ್ದು, ಎಂ.ವೈ ಪಾಟೀಲ್​​ ಹಾಗೂ ಗನ್ ಮ್ಯಾನ್​ ಹಯ್ಯಾಳಿ ದೇಸಾಯಿ ಅವರಿಗೆ ಸಹಾಯ ಮಾಡಿದ ರುದ್ರೇಗೌರ ಪಾಟೀಲ್​ ಬಂಧನವಾಗಿದೆ ಎಂದರು.ಎಮ್ ವೈ ಪಾಟೀಲ್‌ ಗನ್ ಮ್ಯಾನ್ ಹಯ್ಯಾಳಿ ದೇಸಾಯಿ ಮತ್ತು ಅವರಿಗೆ ಸಹಾಯ ಮಾಡಿದ ರುದ್ರಗೌಡ ಪಾಟೀಲ್ ರ ಬಂಧನವಾಗಿದೆ. ಇನ್ನಷ್ಟು ಆಳವಾಗಿ ತನಿಖೆ ಮಾಡಲು ಸೂಚಿಸಲಾಗಿದೆ.ಯುಪಿಎಸ್ಸಿ ಮಾದರಿಯಲ್ಲಿ ಪರೀಕ್ಷೆ ನಡೆಯಬೇಕು ಅನ್ನೋ ರೀತಿ ವ್ಯವಸ್ಥೆ ಮಾಡಲಾಗಿತ್ತುಇಂತಹ ಪಾರದರ್ಶಕತೆ ಇದ್ದಾಗಲು ಅಕ್ರಮವಾಗಿ ಪರೀಕ್ಷೆ ಬರೆದಿರುವುದು ಅಚ್ಚರಿಯಾಗಿದೆ ಎಂದರು.

ಇನ್ನು ಪ್ರಕರಣದಲ್ಲಿ ಕೇಳಿ ಬಂದ ಮಹಿಳೆ ದಿವ್ಯಾ ಹಾಗರಗಿ ನಮ್ಮ ಪಕ್ಷದಲ್ಲಿ ಯಾವುದೇ ಜವಬ್ದಾರಿ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು.ಯಾರೇ ತಪ್ಪು ಮಾಡಿದ್ರು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.ಬೇರೆ ಪಕ್ಷದವರು ಯಾವ ರೀತಿ ಈ ಹಿಂದೆ ಪ್ರಕರಣ ಮುಚ್ಚಿ ಹಾಕಿದ್ದಾರೆ ಎಂಬುದು ಗೊತ್ತಿದೆ.ಮರು ಪರೀಕ್ಷೆ ನಡೆಸಬೇಕಾ ಅಥವಾ ಬೇಡವಾ ಅನ್ನೋದರ ಬಗ್ಗೆ ಮಧ್ಯಂತರ ವರದಿ ಮೇಲೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Vishwa News 24

Recent Posts

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

8 minutes ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

13 minutes ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

43 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

56 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago