ರಾಯಚೂರು: ಜಿಲ್ಲೆಯ ಮಾನ್ವಿ ತಾಲೂಕಿನ ಕುರಡಿ ಗ್ರಾಮದಲ್ಲಿ ಪಿತ್ರಾರ್ಜಿತ ಆಸ್ತಿ ವಿವಾದ ಹಿನ್ನೆಲೆ ತಮ್ಮಂದಿರಿಂದಲೇ ಅಣ್ಣನ ಕೊಲೆ ನಡೆದಿದೆ.
ಸಂಜಯ್ ಕುರ್ಡಿಕರ್ (38) ಕೊಲೆಯಾದ ವ್ಯಕ್ತಿ. ಪಿತ್ರಾರ್ಜಿತ ಆಸ್ತಿ ಅಣ್ಣತಮ್ಮಂದಿರಿಗೆ ಹಂಚಿಕೆ ಆಗಿರಲಿಲ್ಲ. ನ್ಯಾಯಾಲಯ ಮೆಟ್ಟಿಲು ಏರಿ ತನ್ನ ಪಾಲಿನ ಆಸ್ತಿಯನ್ನ ಸಂಜಯ್ ಪಡೆದಿದ್ದ. ಇದರಿಂದ ಆಕ್ರೋಶಗೊಂಡಿದ್ದ ಉಳಿದ ಸಹೋದರರು ಅಣ್ಣ ಸಂಜಯ್ ಜೊತೆ ಜಗಳ ಮಾಡಿದ್ದಾರೆ.
ಗ್ರಾಮದ ದೇವಿ ವೃತ್ತದಲ್ಲಿ ಹಾಡುಹಗಲೇ ತಮ್ಮಂದಿರು ಅಣ್ಣನಿಗೆ ಕಬ್ಬಿಣದ ರಾಡ್, ದೊಣ್ಣೆಯಿಂದ ಹೊಡೆದು ಕೊಲೆ ಮಾಡಿದ್ದಾರೆ. ಆಸ್ತಿ ಜಗಳ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾಗಿದೆ.
ಆರೋಪಿಗಳಾದ ಸಂಜೀವ್, ಸಂಘರ್ಷ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಉಳಿದ ಆರು ಜನ ಆರೋಪಿಗಳು ಪರಾರಿಯಾಗಿದ್ದಾರೆ. ಘಟನೆ ಹಿನ್ನೆಲೆ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಗಳ ವಿಚಾರಣೆ ಮುಂದುವರೆಸಿದ್ದಾರೆ. ಉಳಿದ ಆರೋಪಿಗಳಿಗಾಗಿ ಪತ್ತೆ ಕಾರ್ಯ ನಡೆಸುತ್ತಿದ್ದಾರೆ
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…