Featured

ಪಿಯುಸಿ ತರಗತಿಯಲ್ಲಿ ಐಚ್ಛಿಕ ಪಠ್ಯ ವಿಷಯವಾಗಿ ತುಳು ಸೇರ್ಪಡೆ : ಮುಖ್ಯಮಂತ್ರಿಗಳಿಂದ ಭರವಸೆ -Vishwanews24

ಬೆಂಗಳೂರು, : ಪಿಯುಸಿ ತರಗತಿಯಲ್ಲಿ ಐಚ್ಛಿಕ ಪಠ್ಯ ವಿಷಯವಾಗಿ ತುಳುವನ್ನು ಸೇರ್ಪಡೆ ಮಾಡುವ ವಿಚಾರವಾಗಿ ಮುಖ್ಯಮಂತ್ರಿಗಳಿಂದ ಭರವಸೆ ಸಿಕ್ಕಿದೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅವರ ನೇತೃತ್ವದ ನಿಯೋಗ ಮುಖ್ಯ ಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ವಿಧಾನಸೌಧದ ಮುಖ್ಯ ಮಂತ್ರಿಯವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಿದ್ದರು. ಸಚಿವ ಯು.ಟಿ. ಖಾದರ್‌, ಮುಖ್ಯಮಂತ್ರಿಗಳ ಜತೆ ಈ ಮಾತುಕತೆಯನ್ನು ಆಯೋಜಿಸಿದ್ದರು.

ಈಗಾಗಲೇ ತುಳು ಪಠ್ಯವನ್ನು ಪ್ರೌಢ ಶಾಲೆಯಲ್ಲಿ, ಪದವಿ ಶಿಕ್ಷ ಣದಲ್ಲಿ ಮತ್ತು ಸ್ನಾತಕೋತ್ತರ ಪದವಿ ತರಗತಿಯಲ್ಲಿ ಅಳವಡಿಸಿಕೊಳ್ಳಲಾಗಿದೆ. ಆದರೆ ಪಿಯುಸಿ ತರಗತಿಯಲ್ಲಿ ಮಾತ್ರ ತುಳು ಪಠ್ಯ ಜಾರಿಗೆ ಬರಲು ಬಾಕಿ ಇದೆ ಎಂಬ ವಿಚಾರವನ್ನು ಮುಖ್ಯಮಂತ್ರಿಯವರಿಗೆ ತಿಳಿಸಿದರು.

ಮಾತ್ರವಲ್ಲ, ಮುಂದಿನ ಶೈಕ್ಷ ಣಿಕ ವರ್ಷ ಆರಂಭಕ್ಕೆ ಮುಂಚಿತವಾಗಿ ಪಿಯುಸಿ ತರಗತಿಗಳಿಗೆ ಕೂಡ ತುಳು ಪಠ್ಯವನ್ನು ಐಚ್ಛಿಕ ವಿಷಯವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ.

ಈ ವೇಳೆ ಮುಖ್ಯಮಂತ್ರಿಯವರು ಪಿಯುಸಿಯಲ್ಲಿ ತುಳು ಪಠ್ಯ ಜಾರಿಯ ಬಗ್ಗೆ ಶೀಘ್ರವಾಗಿ ನಿರ್ಧಾರಕ್ಕೆ ಬರಲಾಗುವುದೆಂದು ನಿಯೋಗಕ್ಕೆ ಭರವಸೆ ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago