ಬೆಂಗಳೂರು, : ಪಿಯುಸಿ ತರಗತಿಯಲ್ಲಿ ಐಚ್ಛಿಕ ಪಠ್ಯ ವಿಷಯವಾಗಿ ತುಳುವನ್ನು ಸೇರ್ಪಡೆ ಮಾಡುವ ವಿಚಾರವಾಗಿ ಮುಖ್ಯಮಂತ್ರಿಗಳಿಂದ ಭರವಸೆ ಸಿಕ್ಕಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎ.ಸಿ.ಭಂಡಾರಿ ಅವರ ನೇತೃತ್ವದ ನಿಯೋಗ ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ವಿಧಾನಸೌಧದ ಮುಖ್ಯ ಮಂತ್ರಿಯವರ ಕಚೇರಿಯಲ್ಲಿ ಭೇಟಿಯಾಗಿ ಮಾತುಕತೆ ನಡೆಸಿ ಮನವಿ ಸಲ್ಲಿಸಿದ್ದರು. ಸಚಿವ ಯು.ಟಿ. ಖಾದರ್, ಮುಖ್ಯಮಂತ್ರಿಗಳ ಜತೆ ಈ ಮಾತುಕತೆಯನ್ನು ಆಯೋಜಿಸಿದ್ದರು.
ಈಗಾಗಲೇ ತುಳು ಪಠ್ಯವನ್ನು ಪ್ರೌಢ ಶಾಲೆಯಲ್ಲಿ, ಪದವಿ ಶಿಕ್ಷ ಣದಲ್ಲಿ ಮತ್ತು ಸ್ನಾತಕೋತ್ತರ ಪದವಿ ತರಗತಿಯಲ್ಲಿ ಅಳವಡಿಸಿಕೊಳ್ಳಲಾಗಿದೆ. ಆದರೆ ಪಿಯುಸಿ ತರಗತಿಯಲ್ಲಿ ಮಾತ್ರ ತುಳು ಪಠ್ಯ ಜಾರಿಗೆ ಬರಲು ಬಾಕಿ ಇದೆ ಎಂಬ ವಿಚಾರವನ್ನು ಮುಖ್ಯಮಂತ್ರಿಯವರಿಗೆ ತಿಳಿಸಿದರು.
ಮಾತ್ರವಲ್ಲ, ಮುಂದಿನ ಶೈಕ್ಷ ಣಿಕ ವರ್ಷ ಆರಂಭಕ್ಕೆ ಮುಂಚಿತವಾಗಿ ಪಿಯುಸಿ ತರಗತಿಗಳಿಗೆ ಕೂಡ ತುಳು ಪಠ್ಯವನ್ನು ಐಚ್ಛಿಕ ವಿಷಯವಾಗಿ ಜಾರಿಗೆ ತರುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರಿಗೆ ಮನವಿ ಮಾಡಲಾಗಿದೆ.
ಈ ವೇಳೆ ಮುಖ್ಯಮಂತ್ರಿಯವರು ಪಿಯುಸಿಯಲ್ಲಿ ತುಳು ಪಠ್ಯ ಜಾರಿಯ ಬಗ್ಗೆ ಶೀಘ್ರವಾಗಿ ನಿರ್ಧಾರಕ್ಕೆ ಬರಲಾಗುವುದೆಂದು ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…